Monday, April 29, 2024
Google search engine
Homeಶಿಕ್ಷಣಉದ್ಯೋಗBIG NEWS : ಚಾಲಕರಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಸೂದೆಗೆ ಸಂಪುಟ ಅಸ್ತು : ಸಚಿವ...

BIG NEWS : ಚಾಲಕರಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಸೂದೆಗೆ ಸಂಪುಟ ಅಸ್ತು : ಸಚಿವ HK ಪಾಟೀಲ್

ಬೆಂಗಳೂರು : ಚಾಲಕರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಚಾಲಕರು ಸೇರಿ ಸಾರಿಗೆ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗಾಗಿ ಹೊಸ ದಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆಗಾಗಿ ‘ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಭದ್ರತಾ, ಕಲ್ಯಾಣ ಸುಂಕ ವಿಧೇಯಕ 2024’ನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ HK ಪಾಟೀಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್, ರಾಜ್ಯ ದ ಸಾರಿಗೆ ವಲಯದಲ್ಲಿ ಕೆಲಸ ಮಾಡುತ್ತಿ ರುವ ಚಾಲಕರು ಸೇರಿ ಇನ್ನಿತರ ಕಾರ್ಮಿಕರ ಅಭಿವೃದ್ಧಿಗಾಗಿ ‘ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಅಭಿವೃದ್ಧಿ ಮಂಡಳಿ’ ಸ್ಥಾಪನೆಗೆ ನಿರ್ಧರಿಸಲಾಗಿದೆ.

ಅದಕ್ಕಾಗಿ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024 ರೂಪಿಸಲಾಗುತ್ತಿದ್ದು, ಅದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗು ವುದು. ಬಳಿಕ ಮಂಡಳಿ ಸ್ಥಾಪನೆ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕ ವರ್ಗವಾಗಿರುವ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ಕಾರ್ಮಿಕರಿಗೆ ಅಪಘಾತವಿಮೆನೀಡುವುದು, ಮಕ್ಕಳ ಶೈಕ್ಷಣಿಕ ಧನ ಸಹಾಯ ಸೇರಿದಂತೆ ಇನ್ನಿತರ ಅನುಕೂಲ ಮಾಡಿಕೊಡಲು ಅಭಿ ವೃದ್ಧಿ ಮಂಡಳಿ ಸ್ಥಾಪಿಸಲಾಗುತ್ತಿದೆ. ಈ ಅಭಿ ವೃದ್ಧಿ ಸಾರಿಗೆ ಇಲಾಖೆ ಸಂಗ್ರಹಿಸುತ್ತಿರುವ ಮೂಲ ಸೌಕರ್ಯ ಯೋಜನೆಗಳಲ್ಲಿನ ಸುಂಕದ ಶೇ.7 ರಷ್ಟು ಹಾಗೂ ಬೆಂಗಳೂರು ಮಾಸ್ ರಾಪಿಡ್ ಟ್ರಾನ್ಸಿಟ್ ಲಿಮಿಟೆಡ್‌ನಲ್ಲಿ ಹೂಡಿಕೆಯ ಶೇ.28ರಷ್ಟಿರುವ ಈಕ್ವಿಟಿ ಮೊತ್ತ ವನ್ನು ಸೇರಿ ಒಟ್ಟು 300 ಕೋಟಿ ರು.ಗಳನ್ನು ವಾರ್ಷಿಕ ನಿಧಿಯಾಗಿ ಮಂಡಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments