Wednesday, May 29, 2024
Google search engine
Homeಶಿಕ್ಷಣಉದ್ಯೋಗರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ : ಬಿ.ಎಸ್ ಯಡಿಯೂರಪ್ಪ

ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ : ಬಿ.ಎಸ್ ಯಡಿಯೂರಪ್ಪ

ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಗಜೇಂದ್ರಘಡದಲ್ಲಿ ಗುರುವಾರ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು

ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದಾರೆ. ತಮ್ಮ ತಾಯಿ ತಿರಿಕೊಂಡಾಗ ಅಂತ್ಯ ಸಂಸ್ಕಾರ ಮಾಡಿ ಮತ್ತೆ ಕರ್ತವ್ಯಕ್ಕೆ ಹಾಜರಿಯಾಗಿದ್ದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದದರ್ಭದಲ್ಲಿ ಕಾಂಗ್ರೆಸ್ ನ್ನು ವಿಸರ್ಜಿಸುವಂತೆ ಮಹಾತ್ಮಾ ಗಾಂಧಿಜಿ ಸೂಚಿಸಿದ್ದರು. ಆಗ ಕಾಂಗ್ರೆಸ್ ವಿಸರ್ಜಿಸಲಿಲ್ಲ. ಈಗ ಜನರು ಮಹಾತ್ಮಾ ಗಾಂಧಿ ಯವರ ಆದೇಶ ಪಾಲನೆ ಮಾಡಿ ಕಾಂಗ್ರೆಸ್ ನ್ನು ನಿರ್ಮೂಲನೆ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನರೇಂದ್ರ ಮೋದಿಯವರ ಆಶೀರ್ವಾದಿಂದ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ನಾನು ರೈತರಿಗೆ ನಾಲ್ಕು ಸಾವಿರ ಕೊಡುವುದನ್ನು ಯಾಕೆ ನ್ಲಿಲ್ಲಿಸಿದಿರಿ. ಭಾಗ್ಯಲಕ್ಷ್ಮೀ ಯಾಕೆ ನಿಲ್ಲಿಸಿದಿರಿ, ಸರ್ಕಾರ ದಿವಾಳಿಯಾಗಿದೆ. ಈ ಚುನಾವಣೆ ನಂತರ ಕಾಂಗ್ರೆಸ್ ಧೂಳಿಪಟವಾಗುತ್ತದೆ. ಗಜೇಂದ್ರಘಡಕ್ಕೆ ಅನೇಕ ಸಾರಿ ಬಂದಿದ್ದೇನೆ. ಈ ಬಾರಿ ತೋರಿಸುತ್ತಿರುವ ಉತ್ಸಾಹ ಎಂದೂ ನೋಡಿರಲಿಲ್ಲ. ಮನೆ ಮನೆಗೆ ಹೋಗಿ ಎಲ್ಲರನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಬಂದು ಮೋದಿಯವರಿಗೆ ಮತ ಹಾಕುವಂತೆ ಮಾಡಿ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments