Thursday, June 13, 2024
Google search engine
Homeಆರೋಗ್ಯಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

ಗದಗ ,ಮೇ.23 : ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲೆಯ ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಗಳಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ “ಕೃಷ್ಣಾ” ದಿಂದ ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಡಿ.ಸಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಇದರ ಮೇಲುಸ್ತುವಾರಿ ವಹಿಸಬೇಕು ಎಂದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದೆ. ಆದರೆ ಜಿಲ್ಲಾ, ತಾಲೂಕಿಗೆ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ರೂಪಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು . ಈ ಕುರಿತು ರೈತರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು. ಹಾವೇರಿಯಲ್ಲಿ ಬಿತ್ತನೆ ಬೀಜಕ್ಕೆ ಜನ ಕ್ಯೂ ನಿಂತಿರುವುದು ಮಾಧ್ಯಮ ಮುಖಾಂತರ ತಿಳಿದುಬಂದಿದೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದು. ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಾಗಿದೆ0iÉುೀ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಸಿ.ಎಂ. ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆಗಾರರಾಗುತ್ತಾರೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು.

 

ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿ0iÉು ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.

 

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಮೇ ತಿಂಗಳಲ್ಲಿ ಬಿತ್ತನೆ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದರು.

ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಮಾತನಾಡಿ, ರಾಜ್ಯದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳ ಸಂಖ್ಯೆ ಕಡೆಗೆ ಅಧಿಕಾರಿಗಳು ಗಮನಹರಿಸಬೇಕು. ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿರುವ ಕುರಿತು ಮನವರಿಕೆ ಅಗತ್ಯವಾಗಿದೆ ಎಂದರು.

 

ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕ ಇದೆ. ಬಿತ್ತನೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದರು.

ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ 22 ಸಾವಿರ ರೈತರಿಗೆ ಪರಿಹಾರ ಧನ ಬಾಕಿ ಇತ್ತು. ಇದರಲ್ಲಿ ಹಲವಾರು ಸಮಸ್ಯೆ ಬಗೆಹರಿಸಿದ್ದು, ಇನ್ನುಳಿದ ಸಮಸ್ಯೆಗಳನ್ನು ಸಹ ಮುಂದಿನ 2-3 ದಿನದಲ್ಲಿ ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿ.ಎಂ ಅವರ ಗಮನಕ್ಕೆ ತಂದರು.

 

ಪರಿಹಾರ ವಿತರಣೆ ಮಾಡುವಾಗ ಪ್ರತಿಯೊಬ್ಬ ರೈತರ ಹೊಲದಲ್ಲಿಯೂ ಕ್ರಾಪ್ ಸರ್ವೇ ಲಿಂಕ್ ಮಾಡಲಾಗಿದೆ. 5591 ಫಲಾನುಭವಿಗಳ ಆಧಾರ ಮತ್ತು ಬ್ಯಾಂಕ್ ಖಾತೆ, ಫ್ರೂಟ್ಸ್ ಐಡಿಗಳಲ್ಲಿ ಹೆಸರಿನ ವ್ಯತ್ಯಾಸ ಮತ್ತು ಇತರೆ ಕಾರಣದಿಂದಾಗಿ ಪರಿಹಾರ ಜಮೆ ಆಗದೇ ಇದ್ದು ಅವುಗಳನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. 2023 ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ ಒಟ್ಟಾರೆ 1,13,778 ಫಲಾನುಭವಿಗಳಿಗೆ 1 ರಿಂದ 10 ಹಂತದವರೆಗೆ 110 ಕೋಟಿ ಬೆಳೆ ಹಾನಿ ಪರಿಹಾರ ಧನ ವಿತರಿಸಲಾಗಿದೆ ಎಂದು ವಿವರಿಸಿದರು.

 

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಸಿ.ಎಂ. ಅವರೊಂದಿಗೆ ಭಾಗಿಯಾಗಿದ್ದರು.

ಗದಗ ಜಿಲ್ಲೆಯಿಂದ ಡಿ.ಸಿ. ಜೊತೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಸುರೇಖಾ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಸೇರಿ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments