Thursday, June 13, 2024
Google search engine
Homeಶಿಕ್ಷಣಉದ್ಯೋಗಗದಗ : ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆಗೆ ಮನವಿ

ಗದಗ : ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆಗೆ ಮನವಿ

ಗದಗ 29: ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲ ಹಾಗಾಗಿ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್‍ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ : ರಂಜಕ : ಪೋಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಕಾರಣ ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್‍ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡುವುದು ಮುಖ್ಯವಾಗಿರುತ್ತದೆ.

ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ. ಜಿಲ್ಲೆಯ ಮಾರಾಟಗಾರರು ರಸಗೊಬ್ಬರಗಳನ್ನು ಮಾರಾಟ ಮಾಡುವಾಗ ಪೊಟ್ಯಾಷ್‍ಯುಕ್ತ ಸಂಯುಕ್ತ ರಸಗೊಬ್ಬರಗಳ ಉಪಯುಕ್ತತೆ ಬಗ್ಗೆ ರೈತರಿಗೆ ತಿಳಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments