ಹುಲಕೋಟಿ : ಹೆತ್ತ ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಮಗ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ತಾಲೂಕ ಹುಲಕೋಟಿ ಗ್ರಾಮದಲ್ಲಿ ನಡೆದಿದೆ.

51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ ಪುತ್ರ ವಿಜಯ್ ಕೊಡಲಿಯಿಂದ ಕೊಚ್ಚಿ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಹುಲಕೋಟಿ ಗ್ರಾಮದ ಗಣೇಶ್ ನಗರದಲ್ಲಿ ತಂದೆ ಮಲಗಿದ್ದಾಗ ಮಗ ಕೊಡಲೆಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪೋಲಿಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್.ಪಿ. ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *