ಬಂದೋಬಸ್ತ್ ಗೆ ತೆರಳಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ನಾಪತ್ತೆ ?

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ.ರೈತರ ಪ್ರತಿಭಟನೆ ಹಿನ್ನೆಲೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗಳಾದ ಮಹೇಶ್ ಮತ್ತು ನಿಂಗಪ್ಪ ಅವರು ನಿನ್ನೆ ರಾತ್ರಿ ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ. ಸದ್ಯ ಇಬ್ಬರು ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಿರತರಾಗಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಮಹೇಶ್ ಹಾಗೂ ನಿಂಗಪ್ಪ ಅವರನ್ನು ಕಳುಹಿಸಲಾಗಿತ್ತು. ಪ್ರತಿಭಟನೆ ಮುಕ್ತಾಯದ ನಂತರ ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ಸೋಮವಾರ ತಡರಾತ್ರಿ ಹಳದಲ್ಲಿ ಹರಿಯುತ್ತಿದ್ದ ನೀರಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಎನ್ನಲಾಗಿದೆ ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತೊಂಡಿಹಾಳ ಹಾಗೂ ಬಂಡಿಹಾಳ ಹತ್ತಿರ ಹಳ್ಳ ಉಕ್ಕಿ ಹರಿಯುತ್ತಿತ್ತು . ಅದೇ ಹಳ್ಳದಲ್ಲಿ ಬೈಕ್ ಮೂಲಕ ದಾಟುವಾಗ ತೇಲಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ . ಆದರೆ ಮಹೇಶ್ ನಿಗೆ ಈಜು ಬರುತ್ತಿತ್ತು ಎಂದು ಹೇಳಲಾಗುತ್ತದೆ . ಸದ್ಯಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ . ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *