ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಸಚಿವ ಉಮೇಶ್ ಕತ್ತಿ 9 ಬಾರಿ ಚುನಾವಣೆಗೆ ಸ್ಪರ್ಧಿಸಿ, 8 ಬಾರಿ ಗೆಲುವು ಕಂಡಿದ್ದರು. ಇವರು 6 ಬಾರಿ ಪಕ್ಷವನ್ನು ಬದಲಾವಣೆ ಮಾಡಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ನಾನು ಸಹ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ನೀಡುತ್ತಿದ್ದರು.

Leave a Reply

Your email address will not be published. Required fields are marked *