ಗದಗ : ಚಾಕುವಿನಿಂದ ಇರಿದು ಯುವಕನ ಕೊಲೆ

ಗದಗ: ಹಣಕಾಸಿನ ವಿಷಯಕ್ಕೆಸಂಬದಿಸಿದಂತೆ ತಡ ರಾತ್ರಿ ಚಾಕು ಇರಿತದಲ್ಲಿ ಯುವಕನ್ನೊಬ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾದ ಜವಳಗಲ್ಲಿಯ ಸುದೀಪ್ ಮುಂಡೆವಾಡಿ (22) ಮೃತ ದುರ್ದೈವಿ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಸುದೀಪ್​​ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *