ಗದಗ ಅಗ್ನಿಶಾಮಕ ದಳದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ ಅಗ್ನಿಶಾಮಕ ದಳದಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಅಗ್ನಿಶಾಮಕ ದಳ ಕಛೇರಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಶಾಲೆಯ ಕಟ್ಟಡದ ಫಿಟ್ನೆಸ್ ಪ್ರಮಾಣ ಪತ್ರ ಕೊಡಲು 7,000 ರೂಪಾಯಿ ಲಂಚ ಕೇಳಿದ್ದರು. ಹಣ ಪಡೆಯುತ್ತಿದ್ದಾಗಲೇ ಅಧಿಕಾರಿ ಎನ್ ಎಸ್ ಕಗ್ಗಲಗೌಡ ಸಿಕ್ಕಿಹಾಕಿಕೊಂಡಿದ್ದಾರೆ.. ಅಗ್ನಿಶಾಮಕ ದಳದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *