ಅಕ್ರಮ ಸಾರಾಯಿ ಮಾರಾಟ ಬಂದ್ ಮಾಡಿಸುವಂತೆ ಅಬಕಾರಿ ಅಧಿಕಾರಿಗಳಿಗೆ ಮನವಿ

ಗದಗ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದಲ್ಲಿ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ ಎಂದು ಮಹಿಳೆಯರು ಅಡವಿಸೋಮಾಪೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ ನೇತ್ರಾವತಿ ಉಪ್ಪಾರ್ ಬೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಅಬಕಾರಿ ಅಧಿಕಾರಿಗಳು ಗ್ರಾಮಕ್ಕೆ ಬರುತ್ತಿದ್ದಂತೆ ಮಹಿಳೆಯರೆಲ್ಲ ಒಟ್ಟಾಗಿ ಬಂದು ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುತ್ತಿವೆ. ಮಕ್ಕಳು ಹಾಳಾಗು ತ್ತಿದ್ದಾರೆ. ಇದನ್ನು ತಡೆಗಟ್ಟಬೇಕೆಂದು ಮನವಿ ಪತ್ರ ನೀಡಿದರು.

ಮನವಿ ಸ್ವೀಕರಿಸಿದ ಅಬಕಾರಿ ಅಧಿಕಾರಿಗಳಾದ ನೇತ್ರಾವತಿ ಉಪ್ಪಾರ ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಂ ಪಂಚಾಯಿತಿ ಅಧ್ಯಕ್ಷರು ಶಾಮಸುಂದರ ಡಂಬಳ , ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಾರಕೇರ , ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಪ್ಪ ಅಸುಂಡಿ ,ರಮೇಶ ಹಂಡಿ ,ಮಹೇಶ, ಅಂಗಡಿ,ಸೋಮಣ್ಣ ಅಣ್ಣೆಗೇರಿ,ಅಡವಿಸೋಮಾಪೂರ ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *