ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ : ದಸರಾ ಹಬ್ಬಂದಂದು ಗೊರವಪ್ಪ ಹೇಳಿದ ಭವಿಷ್ಯ

ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕವನ್ನು ಅರ್ಚಕ ಮಾಲತೇಶ್​ ಭಟ್​ ಅವರು ವಿವರಿಸಿದ್ದಾರೆ.

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಎಂದು ಗೊರವಪ್ಪ ನಾಗಪ್ಪ ಉರ್ಮಿ‌ ಅವರು ಕಾರಣೀಕ ನುಡಿದಿದ್ದಾರೆ.ಕಾರ್ಣಿಕ ನುಡಿದ ಗೊರವಪ್ಪ ನಾಗಪ್ಪ ಉರ್ಮಿಿ‌

ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಕಾರಣಿಕವನ್ನು ವಿಶ್ಲೇಷಿಸಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ಮಾಲತೇಶ ದೇವರ ಕಾರ್ಣಿಕೋತ್ಸವ ನಡೆಯುತ್ತದೆ. ಇದನ್ನು ವರ್ಷದ ಭವಿಷ್ಯವಾಣಿ ಅಂತಲೇ ನಂಬಲಾಗಿದೆ.

Leave a Reply

Your email address will not be published. Required fields are marked *