ಗದಗ : KSRTC ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ : ಚಾಲಕ ಪರಾರಿ

ಕೆ ಎಸ್ ಆರ್ ಟಿ ಸಿ ಬಸ್​​ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ಮಧ್ಯೆ ನಡೆದಿದೆ.

ಗದಗ ನಗರದಿಂದ ಬಳಗಾನೂರ ಗ್ರಾಮಕ್ಕೆ ಬಸ್​ ಹೋಗುತ್ತಿತ್ತು. ಈ ವೇಳೆ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್ ಪಲ್ಟಿ ಆಗುತ್ತಿದ್ದಂತೆ ಬಸ್​​ನಿಂದ ಜಿಗಿದು ಚಾಲಕ ಪರಾರಿಯಾಗಿದ್ದಾನೆ. ಗದಗ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *