ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ : ಚಾಕುವಿನಿಂದ ಇರಿದು ಯುವಕನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಹಳೇ ದ್ವೇಷ ಹಾಗು ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.ಸದರಸೋಪಾ ನಿವಾಸಿ ಜಾಫರ್ ಇಮ್ಮಿಯಾಜ್ ದಡೆಸುರ ಕೊಲೆಯಾದ ಯುವಕ. ನಗರದ ಖಸಾಯಿ ಮೋಹಲ್ಲಾದಲ್ಲಿ ಕೃತ್ಯ ನಡೆದಿದೆ.

ಚಾಕು ಇರಿತದಿಂದ ಗಂಭೀರ ಗಾಯಗೊಂಡು ಬಿದ್ದಿದ್ದ ಜಾಫರ್‌ನನ್ನು ಆತನ ಸ್ನೇಹಿತರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *