ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್ ‌ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು

ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್​ಕಾನ್ಸ್​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ.ಎನ್ನಲಾಗಿದೆ

ಅನಿಲ್ ಸಜ್ಜನರ್(48) ಮೃತ ಹೆಡ್​ಕಾನ್ಸ್​ಟೇಬಲ್​. ಅನಿಲ್​ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್​ಕಾನ್ಸ್​ಟೇಬಲ್​ ಆಗಿದ್ದರು. ಅನಿಲ್​ ಸಜ್ಜನರ್ 2 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇಂದು ಅನಿಲ್​ ಸಜ್ಜನರ್ ಎಳನೀರು ತರುವಂತೆ ಪತ್ನಿಯನ್ನು ಹೊರಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *