ಮಹಿಳಾ ಸಿಬ್ಬಂದಿಗಳೊಂದಿಗೆ ಆರೋಗ್ಯಾಧಿಕಾರಿ ಚೆಲ್ಲಾಟ: ವಿಡಿಯೋ ವೈರಲ್

ಮಂಗಳೂರು: ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್, ಕಚೇರಿ ವೇಳೆಯಲ್ಲಿ ತನ್ನ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಆರೋಗ್ಯಾಧಿಕಾರಿ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಚೇರಿಯಲ್ಲಿರುವ ಮಹಿಳಾ ಸಿಬ್ಬಂದಿಯೊಂದಿಗೆ ಪ್ರತಿ ನಿತ್ಯ ಅಸಭ್ಯ ವರ್ತನೆ ಮಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ.ಈ ಅಯೋಗ್ಯ ಅಧಿಕಾರಿ ಕೇವಲ ಆರೋಗ್ಯಾಧಿಕಾರಿ ಮಾತ್ರವಲ್ಲದೇ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದ ಎನ್ನಲಾಗಿದೆ. ಮಹಿಳಾ ಸಿಬ್ಬಂದಿಯನ್ನು ಟ್ರಿಪ್ ಗೆ ಕರೆದುಕೊಂಡು ಹೋಗುತ್ತಿದ್ದ ರತ್ನಾಕರ್, ತನ್ನ ಚೆಲ್ಲಾಟಕ್ಕೆ ಸಹಕರಿಸದಿರುವ ಸಿಬ್ಬಂದಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ. Ji

Leave a Reply

Your email address will not be published. Required fields are marked *