ಸೇನಾ ವಿಮಾನ ಪತನ: 14 ಮಂದಿಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಇವರೊಬ್ಬರೇ…

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ.ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವಾಯುಪಡೆ ಟ್ವೀಟ್ ಮಾಡಿದೆ. ಇನ್ನೂ ವರುಣ್ ಸಿಂಗ್ ಅವರು ಜೀವಂತ ಇರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಸ್ಪಷ್ಟಪಡಿಸಿ ಟ್ವೀಟ್ ಮಾಡಿದ್ದು, ಘಟನೆಯಲ್ಲಿಮೃತಪಟ್ಟ 13 ಮಂದಿಗೆ ಸಂತಾಪ ವ್ಯಕ್ತಪಡಿಸಿರುವ ಅವರು, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಕ್ಯಾಪ್ಟನ್ ವರುಣ್ ಸಿಂಗ್ ಅವರು ಪ್ರಸ್ತುತ ವೆಲ್ಲಿಂಗ್ ಟನ್ ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗ್ ಅವರಿಗೆ 2020ರಲ್ಲಿ ತಮ್ಮ ತೇಜಸ್ ಯುದ್ಧ ವಿಮಾನವನ್ನು ಕಾಪಾಡಿಕೊಂಡಿದ್ದಕ್ಕಾಗಿ ಶೌರ್ಯ ಚಕ್ರ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.

Leave a Reply

Your email address will not be published. Required fields are marked *