ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಅಡವಿಸೋಮಾಪೂರ ಗ್ರಾಮ ಪಂಚಾಯಿತಿಗೆ ತಹಸಿಲ್ದಾರ್ ಭೇಟಿ

ಗದಗ: ಇಂದು ಕರ್ನಾಟಕ ವಿಧಾನಮಂಡಲದ ಮೇಲ್ಮನೆ ವಿಧಾನ ಪರಿಷತ್​ ಚುನಾವಣೆ. 2022ರ ಜನವರಿ 5ರಂದು 25 ಪರಿಷತ್​ ಸದಸ್ಯರ ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ.ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಗದಗ ಜಿಲ್ಲೆಯ ಗದಗ ತಾಲೂಕ ಅಡವಿಸೋಮಾಪೂರ ಗ್ರಾಮ ಪಂಚಾಯಿತಿಗೆ ತಹಸೀಲ್ದಾರ್ ಕಿಶನ್ ಕಲಾಲ್ ಬೇಟಿ ಮಾಡಿ ಪರಿಶೀಲನೆ ಮಾಡಿ ಈಗಾಗಲೇ ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿಗಳು ತಮ್ಮ ಕಾರ್ಯ ಮತಗಟ್ಟೆಗಳಿಗೆ ತೆರಳಿ ತಯಾರಿ ಕೈಗೊಂಡಿದ್ದಾರೆ. ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಆಯೋಗವು ಕಟ್ಟುನಿಟ್ಟಾಗಿ ಸೂಚನೆ ನೀಡಿದೆ. ಮಾಸ್ಕ್‌ ಧರಿಸುವುದು, ಸ್ಯಾನಿಟೈಸ್‌ ಬಳಕೆ ಮಾಡುವುದು ಮತ್ತು ಮತದಾನ ವೇಳೆ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

Leave a Reply

Your email address will not be published. Required fields are marked *