ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಹಬ್ಬದ ಮುಂಗಡ ಹಣ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ತನ್ನ ನೌಕರ೨ʻರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಹಬ್ಬಕ್ಕಾಗಿ ನೀಡುತ್ತಿದ್ದ ಮುಂಗಡವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿದೆ.ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯ ಸಿವಿಲ್‌ ಸೇವಾ ವೃಂದದಲ್ಲಿ ಖಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ ಖಾಯಂ ಸರ್ಕಾರಿ ನೌಕರನಿಗೆ ಒಂದು ಆರ್ಥಿಕ ವರ್ಷದಲ್ಲಿ ಒಂದು ಬಾರಿಗೆ ಮಾತ್ರ ಪ್ರಸ್ತುತ ಮಂಜೂರು ಮಾಡಲಾಗುತ್ತಿರುವ ಬಡ್ಡಿ ರಹಿತ ಹಬ್ಬದ ಮುಂಗಡವನ್ನ ತಕ್ಷಣದಿಂದ ಜಾರಿಗೆ ಬರುವಂತೆ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿ ಆದೇಶಿಸಿದೆ’ ಎಂದು ತಿಳಿಸಿದೆ.ಅಂದ್ಹಾಗೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಬ್ಬದ ಮುಂಗಡ ಮೊತ್ತವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸುವಂತೆ ಕೋರಿತ್ತು. ಸಧ್ಯ ಈ ಮನವಿಗೆ ಸ್ಪಂದಿಸಿರುವ ಸರ್ಕಾರ 10 ತಿಂಗಳ ಅವಧಿಯಲ್ಲಿ ಮರು ಪಾವತಿಸಬಹುದಾದ ಬಡ್ಡಿ ರಹಿತ ಹಬ್ಬದ ಮುಂಗಡವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿದೆ.

Leave a Reply

Your email address will not be published. Required fields are marked *