ಬೆಳಗಾವಿಯಲ್ಲಿ ಪುಂಡಾಟ ನಡೆಸಿದ MES ಪುಂಡರ ವಿರುದ್ಧ ‘ ರೌಡಿಶೀಟರ್ ‘ ಓಪನ್ .. ! ?

ಬೆಳಗಾವಿ: ಶಿವಾಜಿ ಪ್ರತಿಮೆ ಧ್ವಂಸ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಕರ್ನಾಟಕದ ಗಡಿಭಾಗವಾದ ಬೆಳಗಾವಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಈ ನಡುವೆ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ MES ಪುಂಡರ ವಿರುದ್ದ ರೌಡಿ ಶೀಟರ್‌ ತೆರಯಲು ಜಿಲ್ಲಾ ಪೊಲೀಸ್‌ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಇಂದು ನಸುಕಿನ ಜಾವ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯದ ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದುವರೆಗೆ 27 ಮಂದಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಇದೇ ವೇಳೇ ಘಟನೆ ಸಂಬಂಧ ನಗರದ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಪ್ರಕಾರ, ಠಾಣಾ ವ್ಯಾಪ್ತಿಯಲ್ಲಿ ಜನರ ಗುಂಪೊಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ 27 ಜನರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಪೊಲೀಸರ ಸುಮಾರು 26 ವಾಹನಗಳನ್ನು ದುಷ್ಕರ್ಮಿಗಳು ಜಖಂಗೊಳಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *