ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ : ನಾಳೆ ಸದನದಲ್ಲಿ ವಿಧೇಯಕ ಮಂಡನೆ

ಇಂದಿನ ಸಂಪುಟ ಸಭೆ ಮುಕ್ತಾಯವಾಗಿದ್ದು, ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಅನುಮೋದನೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಕರಡು ವಿಧೇಯಕದಲ್ಲಿನ ಕೆಲವು ಬದಲಾವಣೆಗಳೊಂದಿಗೆ ನಾಳೆ ಸದನದಲ್ಲಿ ಮಂಡನೆಯಾಗಲಿದೆ. ಇಂದಿನ ಸಂಪುಟ ಸಭೆ ಮುಕ್ತಾಯವಾಗಿದ್ದು, ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಅನುಮೋದನೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.ರಾಜ್ಯ ಸರ್ಕಾರವು ಪ್ರಸ್ತಾಪಿಸಿರುವ ಮತಾಂತರ ನಿಷೇಧ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ.1) ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ2) ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ3) ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು4) ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ‌ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು5) ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ6) ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ7) ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ8) ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ9) ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು10) ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ11) ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ(ಮಂಗಳವಾರ ವಿಧಾನ ಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯಾಗುವ ಸಂದರ್ಭದಲ್ಲಿ ಇವುಗಳಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ.)

Leave a Reply

Your email address will not be published. Required fields are marked *