ವಸತಿ ರಹಿತರಿಗೆ ಬಿಗ್ ಶಾಕ್ : ಗ್ರಾ.ಪಂಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳು ವಾಪಸ್ !

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಘೋಷಣೆ ಹೊರಡಿಸಿತ್ತು.ಆದರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನೇ ರದ್ದು ಮಾಡಿದೆ ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಬಿಗ್ ಶಾಕ್ ಎದುರಾಗಿದೆ.ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಲಾಗಿತ್ತು. ಮೊದಲು 2011 ರ ಜನಗಣತಿ ಆಧರಿಸಿ ವಸತಿ ರಹಿತರ ಗುರುತಿಸಿ ಫಲಾನುಭವಿಗಳ ಆಯ್ಕೆಗೆ ಸೂಚಿಸಲಾಗಿತ್ತು. ಬಳಿಕ 2018 ರ ರಾಜೀವ್ ಗಾಂಧಿ ವಸತಿ ನಿಗಮ ಸರ್ವೆ ನಡೆಸಿದ ವಸತಿ ರಹಿತ ಪಟ್ಟಿ ಆಧರಿಸಿ ಫಲಾನುಭವಿಗೆ ಆಯ್ಕೆಗೆ ಸೂಚನೆ ನೀಡಲಾಗಿತ್ತು. ನಂತರ ಪ್ರತಿ ಗ್ರಾ.ಪಂಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ. ಹೀಗಾಗಿ 11,92,240 ಮನೆಗಳನ್ನು ವಾಪಸ್ ಪಡೆದಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ.

Leave a Reply

Your email address will not be published. Required fields are marked *