ಕನ್ನಡ ಬಾವುಟ ಸುಟ್ಟು, ಬಸವಣ್ಣನ ಚಿತ್ರ ಅಪವಿತ್ರಗೊಳಿಸಿದ ಮೂವರು ಆರೋಪಿಗಳ ಬಂಧನ

ಬೆಳಗಾವಿ: ಕನ್ನಡ ಬಾವುಟ ಸುಟ್ಟು, ಜಗಜ್ಯೋತಿ ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜಿಲ್ಲೆಯ ಖಾನಾಪುರದಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *