ಪರಿಷತ್ ನಲ್ಲಿ ಮತಾಂತರ ಕಾಯ್ದೆ ಮಂಡಿಸಿದೆ ಇರಲು ನಿರ್ಧಾರ :

ಬೆಳಗಾವಿ: ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲಾಗುತ್ತದೆ. ಪರಿಷತ್ ನಲ್ಲಿಯೂ ಇಂದು ಬಿಜೆಪಿ ಸರ್ಕಾರ ಮಸೂದೆ ಮಂಡಿಸಿ ಒಪ್ಪಿಗೆ ಪಡೆಯಲಿದೆ ಎನ್ನಲಾಗುತ್ತಿತ್ತು. ಆದ್ರೇ ಕೊನೆಯ ಕ್ಷಣದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಸೂದೆ ಮಂಡನೆಯಿಂದ ಹಿಂದೆ ಸರಿದಿದೆ.ಅಂತಿಮ ಕ್ಷಣದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಪರಿಷತ್ ನಲ್ಲಿ ಮಂಡಿಸೋ ನಿರ್ಧಾರದಿಂದ ಹಿಂದೆ ಸರಿದಿದೆ.ಈ ಬಗ್ಗೆ ಮಾಹಿತಿ ನೀಡಿದಂತ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ಈ ಬಾರಿಯ ಪರಿಷತ್ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸದೇ ಇರೋದಕ್ಕೆ ನಿರ್ಧರಿಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಪರಿಷತ್ ನಲ್ಲಿ ಮಸೂಧೆಯನ್ನು ಮಂಡಿಸಲಾಗುತ್ತದೆ ಎಂಬುದಾಗಿ ಪ್ರಕಟಿಸಿದರು. ಅಲ್ಲದೇ ಸದನ ಸುಗಮವಾಗಿ ನಡೆಯೋದಕ್ಕೆ ಕಾರಣರಾದಂತ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *