Friday, March 29, 2024
Google search engine
Homeಅಂಕಣಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮನವಿ

ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮನವಿ

ಪೋಲಿಯೋ ವಿರುದ್ಧ ಕರ್ನಾಟಕ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೈ ಜೋಡಿಸೋಣ

ಗದಗ, ಮಾ. 3: ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸೋಣ. ಪೋಲಿಯೋ ರೋಗ ಮುಕ್ತ ಸಮಾಜ ನಿರ್ಮಿಸೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಅವರು ಹೇಳಿದರು.

ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪೋಲಿಯೊ ಲಸಿಕಾ ಅಭಿಯಾನವನ್ನು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಮೂಲಕ ಚಾಲನೆ ನೀಡಿ ಮಾತಾಡಿದರು.

ಮಾರ್ಚ್ 3 ರಿಂದ 6 ರವರೆಗೆ ನಡೆಯಲಿರುವ

ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಗದಗ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಲ್ಲರು ತಮ್ಮ ಮಕ್ಕಳಿಗೆ ಲಸಿಕೆ‌ಕೊಡಿಸಬೇಕು ಎಂದರು.

ಪೋಲಿಯೋ ಲಸಿಕೆಯನ್ನು ಹನಿಗಳ ರೂಪದಲ್ಲಿ ಉಚಿತವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮ‌ಸಮೀಪದ ಲಸಿಕಾ ಕೇಂದ್ರದಲ್ಲಿ ಪೋಲಿಯೊ ಹನಿ ಹಾಕಿಸಬೇಕು ಎಂದರು.

ಜಿಲ್ಲೆಯಲ್ಲಿ 129327 ಮಕ್ಕಳಿಗೆ ಲಸಿಕೆನೀಡುವ ಗುರಿ ಹೊಂದಿದ್ದು, ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಕರ್ನಾಟಕವನ್ನಾಗಿಸಲು ಕೈಜೋಡಿಸೋಣ ಎಂದರು.

ನಗರಸಭೆ ಉಪಾಧ್ಯಕ್ಷೆ ಶ್ರೀಮತಿ. ಸುನಂದಾ ಬಾಕಳೆ ಪಾಲ್ಗೊಂಡು ಮಾತನಾಡಿ, 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿ ಪೋಲಿಯೋ ಎಂಬ ಭೀಕರ ರೋಗದಿಂದ ಮಕ್ಕಳನ್ನು ರಕ್ಷಿಸಲು ಪೋಷಕರಲ್ಲಿ ಕೋರಿದರು.

ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಉಪನಿರ್ದೇಶಕ ಡಾ. ಶ್ರೀಧರ ಎಸ್.ಎಂ, ಡಿ.ಎಚ್.ಒ. ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ್, ಜಿಲ್ಲಾ‌ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ. ಕೆ.ಎಸ್, ಡಿ.ಎಸ್.ಒ ಡಾ.ವೆಂಕಟೇಶ ರಾಠೋಡ, ನಗರ ಸಭೆ ಸದಸ್ಯ ಪ್ರಕಾಶ ಅಂಗಡಿ, ಇನ್ನರ ವ್ಹೀಲ್ ಕ್ಲಬ್, ರೋಟರಿ ಕ್ಲಬ್ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments