Sunday, December 10, 2023
Google search engine
Homeಬ್ರೇಕಿಂಗ್‌ ನ್ಯೂಸ್ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ 'ಡಾ.ರಜನೀಶ್ ಗೋಯಲ್' ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ‘ಡಾ.ರಜನೀಶ್ ಗೋಯಲ್’ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

 

 

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.

 

ಅಂದಹಾಗೇ ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments