Friday, May 3, 2024
Google search engine
Homeಕ್ರೈಮ್ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ , ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ , ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಗಜೇಂದ್ರಗಡ : ksrtc ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಜರುಗಿದೆ.

ಗಜೇಂದ್ರಗಡ- ಕುಷ್ಟಗಿ ರಸ್ತೆಯಲ್ಲಿ ಈ ದುರ್ಘಟನೆ ಜರುಗಿದ್ದು, ಬೈಕ್‌ನಲ್ಲಿ ಹೊರಟಿದ್ದ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾದ ಹಸನ್‌ಸಾಬ್,(30) ದಾವಲ್‌ಸಾಬ್(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿಂಧನೂರನಿಂದ ಗಜೇಂದ್ರಗಡಕ್ಕೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಜರುಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments