Tuesday, April 30, 2024
Google search engine
Homeಅಪಘಾತಗದಗ : 'KSRTC' ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ !

ಗದಗ : ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ !

ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

ಕೆಎಸ್‌ಆರ್ಟಿಸಿ ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.

ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಬಂದಿದ್ದು ಬಸ್ನ ಮುಂದಿನ ಗ್ಲಾಸ್ ಒಡೆದು ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಟ್ಟಿಯಿಂದ ಮುಂಡರಿಗಿಗೆ ತರುಳುತ್ತಿದ್ದ ವೇಳೆ ಕೆಎಸ್‌ಆರ್ಟಿಸಿ ಬಸ್ ಪಲ್ಟಿ ಆಗಿದೆ. ಬಸ್ ಕಂಡಿಶನ್ ಸರಿ ಇಲ್ಲದ್ದರಿಂದ ಪಲ್ಟಿ ಆಗಿದೆ ಎಂದು ಆರೋಪ ಕೇಳಿ ಬಂದಿದೆ.

ಘಟನಾ ಸ್ಥಳಕ್ಕೆ ಮುಂಡರಗಿ ತಾಲೂಕು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments