Sunday, May 5, 2024
Google search engine
Homeನಮ್ಮ ಜಿಲ್ಲೆಸುಳ್ಳು ಹೇಳಿದ ನರೇಂದ್ರ ಮೋದಿಗೆ ಈ ಬಾರಿ ಮತ ನೀಡಬಾರದು ; ಸಿ.ಎಂ ಸಿದ್ದರಾಮಯ್ಯ

ಸುಳ್ಳು ಹೇಳಿದ ನರೇಂದ್ರ ಮೋದಿಗೆ ಈ ಬಾರಿ ಮತ ನೀಡಬಾರದು ; ಸಿ.ಎಂ ಸಿದ್ದರಾಮಯ್ಯ

ಗದಗ: ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ರ ಪರವಾಗಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನುದ್ದೇಶಿಸಿ ಮಾತನಾಡಿದರು.

ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಶೂನ್ಯ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಗೆ 25 ಸಾವಿರಕ್ಕಿಂತಲೂ ಹೆಚ್ಚು ಮತವನ್ನು ಕೊಡುತ್ತೀರೆಂಬ ವಿಶ್ವಾಸವಿದೆ ಎಂದರು.

ಮೋದಿಯವರು 10 ವರ್ಷಗಳ ಪ್ರಧಾನಿಯಾಗಿದ್ದರೂ, ಅವರು ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮತ್ತೊಮ್ಮೆ ಜನರ ಬಳಿ ಮತ ಕೇಳುವ ನೈತಿಕತೆ ಅವರಿಗೆ ಇಲ್ಲ ಎಂದು ಜನರು ಹೇಳಬೇಕು. 2014 ರಲ್ಲಿ ವಿದೇಶಿ ಕಪ್ಪು ಹಣವನ್ನು ಎಲ್ಲರ ಖಾತೆಗೆ 15 ಲಕ್ಷ ನೀಡುವ ಭರವಸೆ, ಪ್ರತಿ ವರ್ಷ 2 ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣಗೊಳಿಸುವ ಸುಳ್ಳನ್ನು ಹೇಳಿದ್ದಾರೆ. ಪೆಟ್ರೋಲ್, ಗ್ಯಾಸ್, ಆಹಾರವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಇನ್ನೂ ಹೆಚ್ಚಾಗಿದೆ. ಅವರು ಹೇಳಿದ ಅಚ್ಛೇ ದಿನ್ ಬರಲೇ ಇಲ್ಲ. 2014ರಲ್ಲಿ ಒಂದು ಡಾಲರ್ ಬೆಲೆ 58 ರೂ. ಇತ್ತು, ಇಂದು 83 ರೂ. ಆಗಿದೆ. ರೂಪಾಯಿ ಮೌಲ್ಯ ಮತ್ತಷ್ಟು ಕುಸಿದಿದ್ದು, ರೂಪಾಯಿ ಮೌಲ್ಯ ಹೆಚ್ಚಿಸುವ ಅವರ ಭರವಸೆ ಮೋದಿಯ ಮತ್ತೊಂದು ಸುಳ್ಳಾಗಿದೆ. ಮೇಲಿನ ಐದೂ ಭರವಸೆಗಳನ್ನು ಸುಳ್ಳಾಗಿಸಿರುವ ನರೇಂದ್ರ ಮೋದಿಯವರಿಗೆ ಜನರು ಮತ ನೀಡಬೇಕೇ ? ಸುಳ್ಳು ಹೇಳಿದ ನರೇಂದ್ರ ಮೋದಿಗೆ ಈ ಬಾರಿ ಮತ ನೀಡಬಾರದು ಎಂದು ಜನರಿಗೆ ಕರೆ ನೀಡಿದರು.

ಕನಿಷ್ಠ 1 ಲಕ್ಷ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲಬೇಕು

ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮಹಾದಾಯಿ ಯೋಜನೆಗೆ ಜಾರಿ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿಯನ್ನು ಬಸವರಾಜ ಬೊಮ್ಮಾಯಿ ಕೊಡಿಸಲು ಆಗಲಿಲ್ಲ. ನರೇಂದ್ರ ಮೋದಿ ಅವರು ಇಂದಿನವರೆಗೆ ಅನುಮತಿ ನೀಡಿಲ್ಲ. ಕನಿಷ್ಠ 1 ಲಕ್ಷ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲಬೇಕು. ಬಸವರಾಜ ಬೊಮ್ಮಾಯಿಯವರನ್ನು ಸೋಲಿಸಬೇಕು. ಜನತೆಯ ಆಶೀರ್ವಾದ ಕಾಂಗ್ರೆಸ್ ಅಭ್ಯರ್ಥಿ ಮೇಲಿರಲಿ ಎಂದು ಕರೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments