ಗದಗ ಜುಲೈ 9 : ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ನೀಡಲಾಗುವ ಮಾಸಾಶನದ ಸೌಲಭ್ಯ ದೊರೆಯಬೇಕಿದೆ. ಈ ನಿಟ್ಟಿನಲ್ಲಿ 58 ವರ್ಷ ಪೂರ್ಣಗೊಂಡಿರುವ, 25 ವರ್ಷಗಳ ಕಾಲ ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅರ್ಜಿಯನ್ನು ಪಡೆದು ನಿಯಮಾನುಸಾರ ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಠಡಿ ಸಂಖ್ಯೆ:103 ಜಿಲ್ಲಾಡಳಿತ ಭವನ ಗದಗ ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.