Wednesday, March 26, 2025
Google search engine
Homeಸ್ಥಳಿಯ ಸುದ್ದಿಗದಗ : ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರಿಂದ ದಿಢೀರ್ ಭೇಟಿ ಪರಿಶೀಲನೆ

ಗದಗ : ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರಿಂದ ದಿಢೀರ್ ಭೇಟಿ ಪರಿಶೀಲನೆ

ಗದಗ  ಜುಲೈ 9 : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರ ತಂಡದಿಂದ ಗದಗ ನಗರದ ಲಕ್ಷ್ಮೇಶ್ವರ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯ ಹಾಗೂ ಕಳಸಾಪುರ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ನಿಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವೀಕ್ಷಣೆ ನಡೆಸಿದ ಅಧ್ಯಕ್ಷರು ನಿಲಯದ ಮಕ್ಕಳೊಂದಿಗೆ ವಸತಿ ನಿಲಯದ ಊಟ, ಕುಡಿಯುವ ನೀರಿನ ವ್ಯವಸ್ಥೆ ಕುರಿತು ವಿಚಾರಣೆ ನಡೆಸಿದರು. ವಸತಿ ನಿಲಯದ ಅಡುಗೆ ಕೊಠಡಿ, ಗ್ರಂಥಾಲಯ , ಶೌಚಾಲಯ ಪರಿಶೀಲಿಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನಿಲಯದ ಪಾಲಕರಿಗೆ ಸೂಚನೆ ನಿಡಿದರು.

ಕಾರಾಗೃಹ : ಬೆಟಗೇರಿಯ ಗಾಂಧಿ ನಗರದಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದ ಅವರು ಜೈಲಿನಲ್ಲಿರುವ ವಿಚಾರಾಣಾಧೀನ ಕೈದಿಗಳ ಮೂಲಭೂತ ಹಕ್ಕುಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದರು. ನಂತರ ಕಾರಾಗೃಹದಲ್ಲಿನ ಅಡುಗೆ ಕೋಣೆ, ವರಾಂಡಾ ಸೇರಿದಂತೆ ಹಲವೆಡೆ ಖುದ್ದಾಗಿ ಭೇಟಿ ನೀಡಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ವಿಚಾರಣಾಧಿನ ಕೈದಿಗಳಿಗೆ ನೀಡುವ ಉಪಹಾರ, ಊಟ, ಕುಡಿಯುವ ನೀರಿನ ಗುಣಮಟ್ಟದ ಕುರಿತು ಚರ್ಚಿಸಿದ ಅವರು ಕೋರ್ಟಿಗೆ ಹಾಜರುಪಡಿಸಿದ ಸಂದರ್ಭದಲ್ಲಿ ವಕೀಲರನ್ನು ನೇಮಿಸಿದ ಬಗ್ಗೆ ಹಾಗೂ ಬೇಲ್ ನೀಡುವ ಬಗ್ಗೆ ನ್ಯಾಯಾಧೀಶರಲ್ಲಿ ಮನವಿ ಮಾಡುವಂತೆಯೂ ತಿಳಿಸಿದರು.

ಬಸ್ ನಿಲ್ದಾಣ : ಜಿಲ್ಲಾ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದ ಅವರು ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಕುರಿತು ಸಾರಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಅಲ್ಲದೇ ಶೌಚಾಲಯಗಳ ಸ್ವಚ್ಛತೆಗೆ ಹಾಗೂ ಆವರಣದಲ್ಲಿನ ಕಸ ವಿಲೇವಾರಿಗೆ ತಿಳಿಸಿ ಡೆಂಗ್ಯೂ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಹಕಾರ ಪಡೆಯುವಂತೆ ಸೂಚನೆ ನೀಡಿದರು.     

ಆಯೋಗದ ಸದಸ್ಯರಾದ ಎಸ್.ಕೆ. ವಂಟಿಗೋಡಿ, ಕಾರ್ಯದರ್ಶಿ ಎ.ದಿನೇಶ್ ಸಂಪತ್ ರಾಜ್, ಆಪ್ತ ಕಾರ್ಯದರ್ಶಿ ಅರುಣ ಪೂಜಾರ ಅವರು ಅಧ್ಯಕ್ಷರೊಂದಿಗೆ ಭೇಟಿ ನೀಡಿ ಹಲವಾರು ಸೂಚನೆಗಳನ್ನು ಇಲಾಖಾಧಿಕಾರಿಗಳಿಗೆ ನೀಡಿದರು.  

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿ ಗುಂಜೀಕರ್, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ