Thursday, September 19, 2024
Google search engine
Homeಗದಗಗದಗ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಪತ್ರಿಕಾಗೋಷ್ಠಿ

ಗದಗ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಪತ್ರಿಕಾಗೋಷ್ಠಿ

ಗದಗ  ಜುಲೈ 9 : ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸಲ್ಲಿಕೆಯಾದ 9 ಸಾವಿರ ಪ್ರಕರಣಗಳ ಪೈಕಿ ಕಳೆದ 6 ತಿಂಗಳಲ್ಲಿ 6 ಸಾವಿರ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. 3 ಸಾವಿರ ಪ್ರಕರಣಗಳು ವಿವಿಧ ಹಂತದಲ್ಲಿವೆ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 8 ತಿಂಗಳಿಂದ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗಿರಲಿಲ್ಲ. 2023 ರ ನವೆಂಬರ್ 28 ರಂದು ಎಲ್. ನಾರಾಯಣಸ್ವಾಮಿ ಅವರನ್ನು ಸರ್ಕಾರ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಯಿತು. ನಂತರ ಅವರು ಕೇಂದ್ರದ ಲೋಕ ಪಾಲ ನೇಮಕಗೊಳಿಸುವ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದರು. ತದನಂತರ ನಾನು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಬೀದರ, ಕಲಬುರ್ಗಿ, ಯಾದಗಿರಿ , ಹಾಸನ, ಚಿಕ್ಕಮಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಕರಣಗಳ ವಿಲೇವಾರಿ ನಡೆಸಲಾಗಿದೆ. ಗದಗ ಜಿಲ್ಲೆಗೆ ಭೇಟಿ ನೀಡಿರುವುದು 10 ನೇ ಜಿಲ್ಲೆಯಾಗಿದೆ. ನಂತರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗೆ ತೆರಳಿ ಪ್ರಕರಣಗಳ ವಿಲೇವಾರಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಪ್ರಕರಣಗಳ ವಿಚಾರಣೆ ದೂರು ಸ್ವೀಕಾರ ಮಾಡುವುದರಿಂದ ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಆಯೋಗದ ಕೇಂದ್ರ ಕಚೇರಿಗೆ ಪದೇ ಪದೇ ಅಲೆಯುವುದರಿಂದ ಮುಕ್ತಿ ಸಿಕ್ಕಂತಾಗಿ ಸಮಯ ಹಾಗೂ ಆರ್ಥಿಕ ಹೊರೆ ಕಡಿಮೆಯಾಗಿದೆ ಎಂದು ಹೇಳಿದರು.

ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಮಾತನಾಡಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಸ್ಥಳೀಯ ಸಂಸ್ಥೆಗಳು, ಕಾರಾಗೃಹಗಳಿಗೆ ಭೇಟಿ ನೀಡುವುದರ ಮೂಲಕ ಅಲ್ಲಿನ ಪರಿಸ್ಥಿತಿ ಅವಲೋಕನ ನಡೆಸಲಾಗುತ್ತದೆ. ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಒಟ್ಟಾರೆ ಆಯೋಗದಿಂದ ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು. ಸರಿಪಡಿಸದಿದ್ದಲ್ಲಿ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ಮೇಲೆ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಆಯೋಗದ ಕಾರ್ಯದರ್ಶಿ ಎ.ದಿನೇಶ ಸಂಪತ್ ರಾಜ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ ಪೂಜಾರ , ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು