Monday, September 16, 2024
Google search engine
Homeಗದಗಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವಿಮಾ ಕಂತು ಪಾವತಿಸಲು ಜುಲೈ 31 ಕೊನೆಯ...

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವಿಮಾ ಕಂತು ಪಾವತಿಸಲು ಜುಲೈ 31 ಕೊನೆಯ ದಿನ

ಗದಗ  ಜುಲೈ 10 : 2024-25ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು, ಗದಗ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲು ಸರ್ಕಾರದ ಆದೇಶದಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ದಾಳಿಂಬೆ, ಪಪ್ಪಾಯ ಹಾಗೂ ಮಾವು ಬೆಳೆಗಳನ್ನು ಬೆಳೆದ ರೈತರು ವಿಮಾ ಕಂತನ್ನು ಪಾವತಿಸಲು ಜುಲೈ 31 ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆದ ರೈತರು ಸಂಬಂಧಿತ ಬ್ಯಾಂಕ್ ಗಳ ಮೂಲಕ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕ್ ಆನ್‍ಲೈನ್ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರ ಮೂಲಕ ಕೂಡಾ ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ಬೆಳೆವಾರು ಪ್ರತಿ ಎಕರೆಗೆ ವಿಮಾ ಕಂತು ಮಾವು-1,600 ರೂ., ದಾಳಿಂಬೆ, 2540 ರೂ. ಹಾಗೂ ಪಪ್ಪಾಯ-2,680 ರೂ. ಗಳನ್ನು ನಿಗದಿಪಡಿಸಲಾಗಿರುತ್ತದೆ. ಪಹಣಿ ಪತ್ರಿಕೆ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ಆಧಾರ ಕಾರ್ಡನ ಪ್ರತಿ ಸೇರಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿರಹಟ್ಟಿ ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ