Friday, October 18, 2024
Google search engine
Homeಉದ್ಯೋಗಗದಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ...

ಗದಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಗದಗ ಜಿಲ್ಲಾಧಿಕಾರಿಗಳಿಗೆ ಮನವಿ

ಗದಗ ೧೧ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ ೩೧ ಕಂದಾಯ ಜಿಲ್ಲೆ, ೦೩ ಶೈಕ್ಷಣಿಕ ಜಿಲ್ಲೆ ಹಾಗೂ ೧೮೩ ತಾಲ್ಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ ೬.೦೦ ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟç ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ.

ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿರುವುದರಿಂದ

ರಾಜ್ಯ ೭ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು: ರಾಜ್ಯ ೭ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ. ೨೭.೫೦%ಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ ದಿನಾಂಕ:೦೧-೦೭-೨೦೨೨ ರಿಂದ ಅನ್ವಯವಾಗುವಂತೆ ವೇತನ ನಿಗಧಿಪಡಿಸಿ, ದಿ: ೧-೪-೨೦೨೪ ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛÀತ್ತಿಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವAತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು ೨೦೨೧-೨೨ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: ೫-೯-೨೦೨೨ ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು. ಸರ್ಕಾರದ ಮುಂದಿರುವ ರಾಜ್ಯ ಸರ್ಕಾರಿ ನೌಕರರ ಮೇಲ್ಕಂಡ ೩ ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ಈಗಾಗಲೇ ತುಂಬಾ ವಿಳಂಬವಾಗಿರುವುದರಿAದ, ಶೀಘ್ರ ಸರ್ಕಾರಿ ಆದೇಶ ಹೊರಡಿಸಿ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲೆಯ/ತಾಲ್ಲೂಕಿನ ನೌಕರರರು ಹಾಗೂ ಕುಟುಂಬದವರ ಪರವಾಗಿ ಮನವಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾಧ್ಯಕ್ಷರಾದ ರವಿ ಗುಂಜೀಕರ, ಬಸವರಾಜ ಬಳ್ಳಾರಿ ಗೌರವಾಧ್ಯಕ್ಷರು, ಕೆ. ಬಿ. ಕೊಣ್ಣೂರ ಕಾರ್ಯದರ್ಶಿ, ಸತೀಶ ಕಟ್ಟಿಮನಿ ಖಜಾಂಚಿ, ಸಿದ್ದಪ್ಪ ಲಿಂಗದಾಳ ಉಪಾಧ್ಯಕ್ಷರು, ಶರಣಪ್ಪ ನಾಗರಹಳ್ಳಿ, ಎಸ್. ಆರ್. ಬಂಡಿ, ಡಿ. ಎಸ್. ದುಗರಣ್ಣವರ, ಡಿ. ಎಸ್. ತಳವಾರ, ಕಲಹಾಳ, ಹಾಲಭಾವಿ, ವಿ. ಎಂ. ಹಿರೇಮಠ, ಎನ್. ಎಚ್. ಪಾಟೀಲ, ಬಿ.ಎಫ್. ಪೂಜಾರ, ಬೇಲೇರಿ, ಕವಳಿಕಾಯಿ, ಬಿ. ಎಸ್. ಕವಲೂರ, ಎಸ್. ಎಸ್. ನಾರಪ್ಪನವರ, ಹೆಚ್. ಸಿ. ಹುಚ್ಚಣ್ಣವರ, ಪ್ರಶಾಂತ ಮುಧೋಳ, ಎಸ್. ಎಚ್. ಬೀರಕಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ