Wednesday, March 26, 2025
Google search engine
Homeಆರೋಗ್ಯಗದಗ : ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪೂರ್ವಭಾವಿ...

ಗದಗ : ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪೂರ್ವಭಾವಿ ಸಭೆ 

ಗದಗ ೧೪ : ನಗರದ ದುಂಡಪ್ಪ ಮಾನ್ವಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿAದ ಪೂರ್ವಭಾವಿ ಸಭೆ ಜರುಗಿತು. ಸಭೆಯನ್ನು ಉದ್ದೇಶಿಸಿ ಎಚ್.ಎನ್. ರಮೇಶ ಕಾನೂನು ಸಲಹೆಗಾರರು ಹಾಗೂ ನಿವೃತ್ತ ಕಾರ್ಮಿಕ ಅಧಿಕಾರಿ ಮಾತನಾಡಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘ (ರಿ), ಆರೋಗ್ಯ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು ೯,೦೦೦ ಜನ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರವು ಒಂದು ರಾಜಕೀಯ ಸಂಸ್ಥೆಗೆ ಟೆಂಡರ್ ನೀಡಿ ನೌಕರರನ್ನು ಶೋಷಿಸುತ್ತಿದೆ. ರಾಜ್ಯದಲ್ಲಿ ಸುಮಾರು ೨.೫೦ ಲಕ್ಷ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡದೇ ಗುತ್ತಿಗೆ ಪದ್ಧತಿಯನ್ನು ಮುಂದುವರಿಸಿದೆ. ಇದರಿಂದ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ದೊರೆಯದೇ ಜೀವನ ಸಾಗಿಸಲು ತುಂಬಾ ತೊಂದರೆಯಾಗುತ್ತಿದೆ. ಕೋವಿಡ್ ನಂತಹ ಮಹಾಮಾರಿ ರೋಗದ ಸಮಯದಲ್ಲಿ ಪ್ರಾಣದ ಹಂಗು ತೊರೆದು ಆರೋಗ್ಯ ಇಲಾಖೆ ಸಿಬ್ಬಂದಿಯವರು ಕಾರ್ಯನಿರ್ವಹಿಸಿದ್ದಾರೆ. ಆದರೆ ಸರ್ಕಾರವು ಇತ್ತೀಚಿಗೆ ಹೊರಗುತ್ತಿಗೆ ಪದ್ಧತಿಯಲ್ಲಿಯೂ ಕೂಡಾ ಮೀಸಲಾತಿ ತಂದಿರುವುದು ನಮ್ಮೆಲ್ಲರ ವಿರೋಧವಿದೆ. ಎಷ್ಟೋ ಕುಟುಂಬಗಳು ಈ ಧೋರಣೆಯಿಂದ ಬೀದಿಪಾಲಾಗಿವೆ. ಹೊರಗುತ್ತಿಗೆದಾರರಿಗೆ ಸರ್ಕಾರದಿಂದ ಯಾವುದೇ ಪಿಂಚಣಿ, ಭವಿಷ್ಯ ನಿಧಿ ಇಂತಹ ಸೌಲಭ್ಯಗಳಿಂದ ವಂಚಿತರಾಗಿರುತ್ತೇವೆ. ಹೊರಗುತ್ತಿಗೆದಾರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಈವರೆಗೂ ಆರೋಗ್ಯ ಸಚಿವರು ಅದನ್ನು ಪರಿಗಣಿಸದೇ ಇರುವುದು ನಮ್ಮೆಲ್ಲರ ದುರ್ದೈವ. ನಮ್ಮ ನ್ಯಾಯಯುತ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ, ಖಾಸಗಿ ಸಂಸ್ಥೆ ಬದಲಾಗಿ ಸರ್ಕಾರಿ ಸಂಸ್ಥೆ ಅಥವಾ ನಿಗಮ ಮಂಡಳಿ ಮೂಲಕ ವೇತನ ಪಾವತಿ ಮಾಡುವ ವ್ಯವಸ್ಥೆ ಕಲ್ಪಿಸುವುದು, ಸೇವಾ ಭದ್ರತೆ ನೀಡುವುದು, ಮೀಸಲಾತಿ ಹೆಸರಿನಲ್ಲಿ ಹಳೆಯ ನೌಕರರನ್ನು ಕೆಲಸದಿಂದ ತೆಗೆಯಬಾರದು ಮತ್ತು ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಎಲ್ಲ ನೌಕರರನ್ನು ಮುಂದುವರೆಸುವುದು ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಪೂರ್ವಭಾವಿ ಸಭೆಯಲ್ಲಿ ಸವಿಸ್ತಾರವಾಗಿ ಕಾನೂನು ಸಲಹೆಗಾರರಾದ ಎಚ್.ಎನ್. ರಮೇಶ ಅಭಿಪ್ರಾಯಪಟ್ಟರು.

ಈ ಪೂರ್ವಭಾವಿ ಸಭೆಯಲ್ಲಿ ಅಕ್ಷಯ ಡಿ.ಎಮ್. ಗೌಡ, ಶಿವಕುಮಾರ ಆರ್., ಶ್ರೀಮತಿ ಮಂಜುಳಾ, ಶ್ರೀಮತಿ ಸಾವಿತ್ರಿ ಬಿ. ಇಪ್ಪರಗಿ, ರವೀಂದ್ರ ಬಿ., ನವೀನಕುಮಾರ ಬಿ., ಪ್ರವೀಣ ಶಿಗ್ಲಿಯವರ, ಶ್ರೀಶೈಲ ಕರಿಬೀಮಗೋಳ, ಕೇದಾರೇಶ್ವರ ದೊಡ್ಡಮನಿ, ಸುರೇಶ ಜೋಗಿನ, ಕೆ.ಎಚ್. ಅಮೀರಅಲಿ, ರಂಜಾನಸಾಬ ಹಳ್ಯಾಳ ಸೇರಿದಂತೆ ಗದಗ ಜಿಲ್ಲಾ ಎಲ್ಲ ತಾಲೂಕುಗಳ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು. ನಾಳೆ ದಿನಾಂಕ: ೧೫-೦೭-೨೦೨೪ ಸೋಮವಾರ ದಂದು ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಗದಗ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಬೆಳಿಗ್ಗೆ ೧೧-೦೦ ಗಂಟೆಗೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ