ಗದಗ ಜುಲೈ 15 : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ತಾಲೂಕಾ ಆರೋಗ್ಯಾಧಿಕರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಗದಗ ತಾಲೂಕಾ ಆಸ್ಪತ್ರೆ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ಯ ಜಾಥಾ ಕಾರ್ಯಕ್ರಮವು ಜರುಗಿತು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ.ಭಜಂತ್ರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾದಿಕಾರಿ ಡಾ.ಪ್ರೀತ್ ಖೋನಾ, ಜಿಲ್ಲಾ ಆರೋಗ್ಯ ಶಿಕ್ಷಣಾದಿಕಾರಿ ರೂಪಸೇನ ಚವ್ಹಾಣ, ಶ್ರೀಮತಿ ಪುಷ್ಪಾ ಪಾಟೀಲ, ಹಾಗೂ ಗೀತಾ ಕಾಂಬಳೆ , ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು , ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.