ಗದಗ ಆಗಷ್ಟ 1 : ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ವ್ಯಸನ ಮುಕ್ತ ಸಮಾಜ ಅನಿವಾರ್ಯ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತೆವೆ, ವಿಶಿಷ್ಟ ಮತ್ತು ಶ್ರೇಷ್ಠ ವ್ಯಕ್ತಿಯಾದ ಶ್ರೀಗಳು ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ಅವರು ತಿಳಿಸಿದರು.
ವಿಜಯಪುರ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಅಗಸ್ಟ್ 1, 1930 ರಲ್ಲಿ ಜನಿಸಿದ ಡಾ.ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಪೂಜ್ಯರ ಬಾಲ್ಯದ ಹೆಸರು ಮಹಾಂತಯ್ಯ. ಮುಧೋಳ ಗವಿಮಠದಲ್ಲಿ ಸಂಸ್ಕೃತ ಪಾಠಶಾಲೆಗೆ ಸೇರಿದ ಮಹಾಂತಯ್ಯ ಅವರು ಅಲ್ಲಿ ಮೂರು ವರ್ಷಗಳ ಕಾಲ ಅಧ್ಯಯನ ಮಾಡಿ ನಂತರ 1944 ರಲ್ಲಿ ಶಿವಯೋಗ ಮಂದಿರದಲ್ಲಿ ಆರು ವರ್ಷಗಳ ಕಾಲ ಸಂಸ್ಕೃತ-ಕನ್ನಡ ವಿದ್ಯಾಭ್ಯಾಸ ಮಾಡಿದರು. ಮುಂದಿನ ವಿದ್ಯಾಭ್ಯಾಸಕ್ಕಾಗಿ ಬನಾರಸ ಅಂದರೆ ಕಾಶಿಗೆ ತೆರಳಿ ಅಲ್ಲಿ ಜಂಗಮವಾಡಿ ಮಠದಲ್ಲಿದ್ದು, ಸಂಸ್ಕೃತ, ಹಿಂದಿ,ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು.
ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪಿಸಿದ ಜೊತೆಗೆ ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದರು ಎಂದು ಅವರು ಹೇಳಿದರು.
ಜಗತ್ತಿನಲ್ಲಿ ವಿಶೆಷವಾಗಿ ಯುವಜನಾಂಗ ಹಲವಾರು ಮಾದಕ ವಸ್ತುಗಳಿಗೆ ಬಲಿಯಾಗಿದ್ದು, ಭಾರತದಲ್ಲಿ ಸುಮಾರು 10 ಕೋಟಿ ಜನರು ಮಾದಕ ವ್ಯಸನಕ್ಕೆ ದಾಸರಾಗಿದ್ದು ಅದರಲ್ಲಿ ಕಾಲೇಜು ವಿದ್ಯಾರ್ಥಿಗಳ ಸೇರಿದಂತೆ ಯುವಜನರ ಸಂಖ್ಯೆ ಹಚ್ಚಾಗಿರುವುದು ಆಂತಕಕಾರಿ ಮಾದಕ ವಸ್ತುಗಳ ಸೇವನೆಯಿಂದ ಮಾರಣಾಂತಿಕ ರೋಗಗಳಾದ ಕ್ಯಾನ್ಸರ್, ಲಿವರ್, ಹೃದಯ, ಕಿಡ್ನಿ ಸೇರಿದಂತೆ ವಿವಿಧ ಅಂಗಾಂಗಗಳು ವಿಫಲವಾಗುತ್ತವೆ ಎಂದರು.
ಆಧುನಿಕ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಪ್ಯಾಷನ್ ಆಗಿದ್ದು ವೈದ್ಯಕೀಯ ಮಹಾವಿದ್ಯಾಲಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸೇರಿದಂತೆ ಅನೇಕ ಯುವಜನತೆ ಡ್ರಗ್ಸ ನ್ನು ಬಳಸುತ್ತಿದ್ದು ಆಘಾತಕಾರಿ ಇದರಿಂದ ವ್ಯಸನಿಗಳ ವಯಕ್ತಿಕ ಜೀವನ ಸೇರಿದಂತೆ ದೇಶದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಆರೋಗ್ಯ ಸಂಪತ್ತಿಗೆ ಮಿಗಿಲಾಗಿದ್ದು ಜಗತ್ತಿನಲ್ಲಿ ಯಾವುದು ಇಲ್ಲ, ಆರೋಗ್ಯವಾಗಿದ್ದರೆ ಜೀವನದಲ್ಲಿ ಏನನಾದರೂ ಸಾಧನೆಮಾಡಬಹುದು, ದೇಶದ ನಿಜವಾದ ಆಸ್ತಿಯಾದ ಯುವಜನರು, ಯುವಜರಿಗೆ ದೇಶ ಕಟ್ಟಿ ಬೆಳೆಸುವ ಜವಬ್ದಾರಿಯಿದೆ. ಈಗಾಗಲೇ ವ್ಯಸನಮುಕ್ತಗೊಳಿಸಲು ಹಲವಾರು ಕಾನೂನು ಜಾರಿಯಲ್ಲಿವೆ ಕಾನೂನು ಬಾಹಿರವಾಗಿ ಮಾದಕ ವಸ್ತುಗಳ ಸರಬರಾಜನ್ನು ನಿಯಂತ್ರಿಸಿ ಶಿಕ್ಷಿಸುವುದರಿಂದ ವ್ಯಸನಿಗಳು ಕಡಿಮೆಯಾಗುವಿದಿಲ್ಲ, ವ್ಯಸನಿಗಳ ಮನ ಪರಿವರ್ತನೆ ಮಾಡಲು ಪಾಲಕರು ಸ್ನೇಹಿತರು ಸೇರಿದಂತೆ ಪ್ರತಿಯೊಬ್ಬರು ಶ್ರಮಿಸಿದಾಗ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಎಲ್ಲರಿಗೂ ವ್ಯಸನ ಮುಕ್ತ ಸಮಾಜ ನಿರ್ಮಿ ಸಲು ಪ್ರತಿಜ್ಞಾ ವಿಧಿ ಭೋದಿಸಿದರು.
ಸಂಪನ್ಮೂನ ವ್ಯಕ್ತಿ ಮತ್ತು ಗದಗ ವೈದ್ಯಕೀಯ ವಿಜ್ಣಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದ ಕರಿನಾಗಣ್ಣನವರ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ತಿಳಿಸಿದರು, ಚಿಕಿತ್ಸೆಗಿಂತ ತಡೆಗಟ್ಟವಿಕೆ ಉತ್ತಮವಾಗಿದ್ದು,ಒಂದು ಸಿಗರೇಟ್ ಸೇರುವುದರಿಂದ ಜೀವನದ ಅತ್ಯಮೂಲ್ಯ 11 ನಿಮಿಷಗಳನ್ನು ಕಳೆದುಕೊಳ್ಳುತ್ತೆ ,ಹಾಗು ಸಿಗರೇಟ್ ನಲ್ಲಿ 6000ಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿರುತ್ತವೆ ಮತ್ತು ಅದರಲ್ಲಿ 60 ಕ್ಕೂ ಹೆಚ್ಚೂ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ದಾರಿ ಮಾಡಿ ಕೊಡುತ್ತವೆ, ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ, ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಡಿ ಮಾಡಿಕೊಂಡು ಜೀವನದಲ್ಲಿ ಸಫಲವಾಗಬೇಕೆಂದು ಹಾಗೂ ಪಿಪಿಟಿ ಮೂಲಕ ಮಾದಕ ವ್ಯಸನದ ಕಾರಣಗಳು, ಅದರಿಂದಾಗುವ ಪರಿಣಾಮ ಸೇರಿದಂತೆ ವ್ಯಸನದಿಂದ ಹೇಗೆ ಮುಕ್ತರಾಗಬೇಕೆಂದು ವಿದ್ಯಾರ್ಥಿಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ವಾರ್ತಾಧಿಕಾರಿ ವಸಂತ ಮಡ್ಲೂರ, ಶಿರಸ್ತೇದಾರ ಎಸ್ ಎಂ ಹಿರೇಮಠ, ವಿದ್ಯಾರ್ಥಿಗಳು ಹಾಜರಿದ್ದರು. ಶ್ರೀಮತಿ ಎಸ್ ಎಸ್ ಗೌಡರ ಕಾರ್ಯಕ್ರಮ ನಿರ್ವಹಿಸಿದರು.