Thursday, September 19, 2024
Google search engine
Homeಗದಗಗದಗ : ಶ್ರವಣಕುಮಾರ ನಾಯಕ ,ಮರೆಪ್ಪ ನಾಯಕರವರಿಗೆ ಸೂಕ್ತ ರಕ್ಷಣೆ ಒದಗಿಸಲು ಮನವಿ 

ಗದಗ : ಶ್ರವಣಕುಮಾರ ನಾಯಕ ,ಮರೆಪ್ಪ ನಾಯಕರವರಿಗೆ ಸೂಕ್ತ ರಕ್ಷಣೆ ಒದಗಿಸಲು ಮನವಿ 

ಗದಗ ಆಗಷ್ಟ ೨ : ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ಶ್ರೀ ಶ್ರವಣಕುಮಾರ ನಾಯಕ ಹಾಗೂ ಉತ್ತರ ಕರ್ನಾಟಕ ಪ್ರದೇಶ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾದ ಮರೆಪ್ಪ ನಾಯಕ ಮಗ್ಗಂಪುರ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಗದಗ ಜಿಲ್ಲಾ ಯುವ ಘಟಕ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ( ೨ ) , ಬೆಂಗಳೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಸನ್ಮಾನ್ಯ ಶ್ರೀ ಜಿ . ಪರಮೇಶ್ವರ ಮಾನ್ಯ ಗೃಹಮಂತ್ರಿ ಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾದ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಅನಿಲಕುಮಾರ ಪ . ಸಿದ್ದಮ್ಮನಹಳ್ಳಿ ಶ್ರೀ ಶ್ರವಣಕುಮಾರ ನಾಯಕ ಅವರ ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರದ ವಿರುದ್ಧ ಧ್ವನಿ ಎತ್ತಿರುವ ಶ್ರವಣಕುಮಾರ ನಾಯಕ ಅವರು ಹಾಗೂ ಯಾದಗಿರಿ ಜಿಲ್ಲೆ ಉತ್ತರ ಕರ್ನಾಟಕ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾಗಿರುವ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಶ್ರೀ ಮರೆಪ್ಪ ನಾಯಕ ಮಗ್ಗಂಪುರ ಅವರು ಯಾದಗಿರಿ ಜಿಲ್ಲೆಯ ಕಲಬುರ್ಗಿ , ಬೀದರ ಜಿಲ್ಲೆಯಲ್ಲಿ ತಳವಾರ , ಪರಿವಾರದ , ಗೊಂಡ , ರಾಜಗೊಂಡ ಹೆಸರಿನಲ್ಲಿ ವ್ಯಾಪಕವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಹೋರಾಟದ ಮೂಲಕ ತಡೆದು ಸಾವಿರಾರು ನಕಲಿ ಜಾತಿ ಪ್ರಮಾಣ ಪತ್ರ ತಡೆದಿರುತ್ತಾರೆ . ಅವರ ಹೋರಾಟಗಾರರ ಆತ್ಮಸ್ಥೆರ್ಯ ಕುಗ್ಗಿಸಲು ಕೆಲವು ಸಂಘಟನೆಗಳು ಅವರನ್ನು ಗಡಿಪಾರು ಮಾಡಲು ಆಗ್ರಹಿಸಿವೆ .

ಹೋರಾಟಗಾರರ ಹೋರಾಟವನ್ನು ಹತ್ತಿಕ್ಕುವಂಥ ಕೆಲಸ ಯಾವದೇ ಬೇರೆ ಸಮಾಜ ಕುಗ್ಗಿಸುವ ಕೆಲಸವನ್ನು ವಾಲ್ಮೀಕಿ ಸಮಾಜವು ತೀವ್ರವಾಗಿ ಖಂಡಿಸುತ್ತದೆ . ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು . ಕಾರಣ ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ಶ್ರೀ ಶ್ರವಣಕುಮಾರ ನಾಯಕ ಹಾಗೂ ಉತ್ತರ ಕರ್ನಾಟಕ ಪ್ರದೇಶ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾದ ಮರೆಪ್ಪ ನಾಯಕ ಮಗ್ಗಂಪುರ ಅವರಿಗೆ ಗೃಹ ಇಲಾಖೆಯಿಂದ ಸೂಕ್ತ ರಕ್ಷಣೆ ಒದಗಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ( ೨ ) , ಬೆಂಗಳೂರು ಗದಗ ಜಿಲ್ಲಾ ಯುವ ಘಟಕ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು