ಗದಗ ಅಗಷ್ಟ 5 : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಅಗಷ್ಟ 7 ರ ಗದಗ ಜಿಲ್ಲಾ ಪ್ರವಾಸದ ವಿವರ.
ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ತಾಲೂಕ ಮಟ್ಟದ ‘ಬಿ’ ಗ್ರುಪ್ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ .ಪಾಲ್ಗೊಳ್ಳುವರು.
ಬೆಳಿಗ್ಗೆ 10 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಸಭಾಭವನದಲ್ಲಿ ಜರುಗುವ ಗದಗ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರದಲ್ಲಿ ಭಾಗವಹಿಸುವರು.
ಬೆಳ್ಳಗ್ಗೆ 11 ಗಂಟೆಗೆ ಜಿಲ್ಲೆಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆಯುವ 10 ನೇ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 1 ಗಂಟೆಗೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಾಲ್ಮೀಕಿ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಸೊರಟೂರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನ ಮತ್ತು ಸಮುದಾಯ ಉದ್ಘಾಟನೆ ಮತ್ತು ಮೂರ್ತಿ ಪ್ರತಿಪ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30 ಗಂಟೆಗೆ ಸೊರಟೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಕಾರ್ಯಲಯ ಪ್ರಕಟಣೆಯಲ್ಲಿ ತಿಳಿಸಿದೆ.