ಗದಗ ಅಗಸ್ಟ 6 : ಗದಗ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ವಿಶ್ವ ಬ್ಯಾಂಕಿನ ನೆರವಿನ ಪಾಲುದಾರಿಕೆಯಲ್ಲಿ ಅಟಲ್ ಭೂಜಲ್ ಯೋಜನೆ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜಲ ಸಂಪನ್ಮೂಲ, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ, ಜಲಶಕ್ತಿ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಸುಬೋಧ್ ಯಾದವ್ ಅವರು ಇತ್ತೀಚೆಗೆ ಕುರ್ತಕೋಟಿ ಗ್ರಾಮ ಪಂಚಾಯಿತಿಯಲ್ಲಿ ಅಟಲ್ ಭೂಜಲ ಯೋಜನೆಯ ಸಮುದಾಯ ಸಹಭಾಗಿತ್ವ ಅಂತರ್ಜಲ ನಿರ್ವಹಣಾ ಸಮಿತಿಯ ಸದಸ್ಯರು, ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮ ನಡೆಸಿದರು.
ನರೇಗಾ ಸಹಾಯಕ ನಿರ್ದೇಶಕರು ಕುಮಾರ್ ಪೂಜಾರ ಸ್ವಾಗತಿಸಿದರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಮತ್ತು ಸಹಾಯಕ ಕೃಷಿ ನಿರ್ದೇಶಕರು ಮಾತನಾಡಿದರು.
ಕುರ್ತಕೋಟಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸರೋಜಾ ಬೂ. ಅಂಗಡಿ, ಗಣ್ಯರಾದ ಡಿ.ಆರ್. ಪಾಟೀಲ್ , ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ . ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ರಾಮಚಂದ್ರಯ್ಯ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಮಧುಮತಿ ಅಪ್ಪಣ್ಣ ಇನಾಮತಿ, ಜಿಲ್ಲಾ ಕಾರ್ಯಕ್ರಮ ನಿರ್ವಹಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು, ಜಿಲ್ಲಾ ಅನುಷ್ಟಾನ ಪಾಲುದಾರ ಸಂಸ್ಥೆಯ ಸಿಬ್ಬಂಧಿಗಳು, ಗ್ರಾಮ ಪಂಚಾಯತಿಯ ಸಿಬ್ಬಂಧಿಗಳು ಹಾಗೂ ಗ್ರಾಮದ ಸಮಸ್ತ ನಾಗರೀಕರು ಭಾಗವಹಿಸಿದ್ದರು.