27.4 C
New York
Saturday, May 17, 2025

Buy now

spot_img

ಗದಗ : ಅರ್ಜಿ ಆಹ್ವಾನ

ಅರ್ಜಿ ಆಹ್ವಾನ

ಗದಗ  ಅಗಸ್ಟ 8: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024 ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲು ಉದೇಶಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಗಸ್ಟ 17 ಕೊನೆಯ ದಿನವಾಗಿದ್ದು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ http://karnatakasahithyaacademy.org ಯಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಗದಗ  ಅಗಸ್ಟ 8: ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ)ಅಭಿವೃದ್ದಿಗಾಗಿ 2024-25ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಯೋಜನೆ, ಜವಜಲ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂಸಹ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ, 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ ಅಗಸ್ಟ 8: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ 30 ಕೊನೆಯ ದಿನವಾಗಿದ್ದು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಫಲಾನುಭವಿಯು ಒಂದು ಬಾರಿ ಸಾಲ ಪಡೆದು, ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಮರು ಪಾವತಿಸಿದಲ್ಲಿ ಅಂತಹ ಫಲಾನುಭವಿಗಳಿಗೆ ಒಂದು ಬಾರಿಗೆ ಮಾತ್ರ ದುಪ್ಪಟ್ಟು ಸಾಲವನ್ನು ಗರಿಷ್ಠ ರೂ.2.00 ಲಕ್ಷಗಳವರೆಗೆ ಯಾವುದೇ ಸಹಾಯಧನವಿಲ್ಲದೇ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ನೀಡಲಾಗುವುದು.

ಹೆಚ್ಚಿನ ಮಾಹಿತಿಯನ್ನು ಸಂಬAಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ./ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿಯಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿಯಲ್ಲಿ / ನಿಗಮದ ವೆಬ್ ಸೈಟ್ http://ambigaradevelopment.karnataka.gov.in ನಲ್ಲಿ ಪಡೆಯಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ