Monday, September 16, 2024
Google search engine
Homeಆರೋಗ್ಯಗದಗ : ಅಂಗಾಂಗ ದಾನದ ಕುರಿತು ಎಲ್ಲರಿಗೂ ಜಾಗೃತಿ ಅಗತ್ಯ: ಎಚ್.ಕೆ.ಪಾಟೀಲ್

ಗದಗ : ಅಂಗಾಂಗ ದಾನದ ಕುರಿತು ಎಲ್ಲರಿಗೂ ಜಾಗೃತಿ ಅಗತ್ಯ: ಎಚ್.ಕೆ.ಪಾಟೀಲ್

ಗದಗ  ಅಗಸ್ಟ 13 : ದಾನಗಳಲ್ಲಿಯೇ ಅಂಗಾAಗ ದಾನ ಅತ್ಯಂತ ಪವಿತ್ರವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಐಎಂಎ, ಜಿಮ್ಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಾಯನ್ಸ್ ಕ್ಲಬ್ ಹಾಗೂ ನಗರದ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ವಿಶ್ವ ಅಂಗಾAಗ ದಿನಾಚರಣೆ ನಿಮಿತ್ತ ಕಾಲ್ನಡಿಗೆ ಹಾಗೂ ಸೈಕಲ್ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗದಗ-ಬೆಟಗೇರಿ ಅವಳಿ ನಗರದಲ್ಲಿ ವೈದ್ಯರೆಲ್ಲರೂ ಕೂಡಿಕೊಂಡು ವಿಶ್ವ ಅಂಗಾಂಗ ದಿನ ಆಚರಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಷಯ. ಅಂಗಾAಗ ದಾನ ವಿಷಯ ಕುರಿತು ಉದಾತ್ತ ಉದ್ದೇಶವನ್ನಿಟ್ಟುಕೊಂಡು ಮಾಡುತ್ತಿರುವ ನಿಮ ್ಮಶ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಜಿಲ್ಲೆ, ರಾಜ್ಯ ಸೇರಿ ದೇಶದಲ್ಲಿ ಅಂಗಾAಗಗಳ ಅಗತ್ಯ ಇದ್ದೇ ಇದೆ. ನಮ್ಮೆಲ್ಲರಿಗೂ ಗೊತ್ತಿದ್ದ ಹಾಗೆ ಕಳೆದ 25 ವರ್ಷಗಳ ಹಿಂದೆ ರಕ್ತದಾನಕ್ಕೂ ಕೊರತೆಯಾಗುವಂತಹ ಪರಿಸ್ಥಿತಿ ಇತ್ತು. ಸಧ್ಯ ಜನರು ಜಾಗೃತರಾಗಿದ್ದು ಇಂದು ರಕ್ತದಾನ ಶಿಬಿರ ಸೇರಿ ರಕ್ತ ಭಂಡಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಕ್ತದಾನ ಮಾಡುತ್ತಿದ್ದಾರೆ ಎಂದರು.

ರಕ್ತದಾನ ಹಾಗೆ ಅಂಗಾAಗ ದಾನ ಅತ್ಯಂತ ಪವಿತ್ರ ದಾನಗಳಲ್ಲೊಂದಾಗಿದೆ. ಅದನ್ನು ಜಾಗೃತಿಗೊಳಿಸಲು ಯುವಕರನ್ನು ಒಟ್ಟುಗೂಡಿಸಿರುವುದು ಸಂತಸದ ವಿಷಯವಾಗಿದೆ. ಇಲ್ಲಿ ಸೇರಿರುವ ಎಲ್ಲರೂ ಅಂಗಾAಗ ದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅಂಗಾAಗ ವೈಫಲ್ಯದಿಂದ ಬಳಲುತ್ತಿರುವವರಿಗೆ ಅಂಗಾAಗ ಜೋಡಣೆಗೆ ಅನುಕೂಲವಾಗುವಂತೆ ಅಂಗಾAಗ ದಾನಕ್ಕೆ ಪ್ರೇರೇಪಿಸುವ ಕೆಲಸವಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ತಿಳಿಸಿದರು..

ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಸಚಿವರು ವೈದ್ಯರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆಯಲ್ಲಿ ಪಾಲ್ಗೊಂಡರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಾ. ಅವಿನಾಶ ಓದುಗೌಡರ ಸೇರಿ ನಗರದ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ಅವಳಿ ನಗರದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ