Thursday, September 19, 2024
Google search engine
Homeಗದಗಗದಗ : ಶಾಂತಿ ಸೌಹಾರ್ದತೆಯಿಂದ ದೇಶವನ್ನು ಪ್ರಗತಿ ಪಥದೆಡೆ ಮುನ್ನಡೆಸೋಣ : ಸಚಿವ ಎಚ್.ಕೆ. ಪಾಟೀಲ

ಗದಗ : ಶಾಂತಿ ಸೌಹಾರ್ದತೆಯಿಂದ ದೇಶವನ್ನು ಪ್ರಗತಿ ಪಥದೆಡೆ ಮುನ್ನಡೆಸೋಣ : ಸಚಿವ ಎಚ್.ಕೆ. ಪಾಟೀಲ

ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ

ಗದಗ  ಅಗಸ್ಟ 14: ಅನೇಕ ಸ್ವಾತಂತ್ರ್ಯ ಹೋರಾಟಗಾರರ, ದೇಶಭಕ್ತರುಗಳ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ÷್ಯ ದೊರಕಿದೆ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಮೂಲಕ ನಾವಿಂದು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವವನ್ನು ಎತ್ತಿ ಹಿಡಿಯುವ ಮೂಲಕ ದೇಶವನ್ನು ಅಭಿವೃದ್ಧಿ ಪಥದೆಡೆಗೆ ಮುನ್ನಡೆಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಕೆ. ಪಾಟೀಲ ಹೇಳಿದರು.

ಅವರು ಬುಧವಾರ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗದಗ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ವಾಕ್‌ಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.

ನಾವಿಂದು ಶಾಂತಿ, ಸೌಹಾರ್ದತೆಗೆ ಹಾಗೂ ಭಾತೃತ್ವಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸದೃಢ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲ ಪ್ರಜೆಗಳೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ದೇಶಭಕ್ತಿ ಗೀತೆಗಳ ನಿನಾದದೊಂದಿಗೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ತಿರಂಗಾ ಅಭಿಯಾನವು ಪ್ರಾರಂಭವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಗಾಂಧೀ ವೃತ್ತದಲ್ಲಿ ಬಂದು ತಲುಪಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಅವರು ಸಂವಿಧಾನದ ಪೀಠಿಕೆಯನ್ನು ಪಠಿಸಿದರು.

ವಾಕಥಾನ್ ದಲ್ಲಿ ಶಾಲಾ ಮಕ್ಕಳು ವಿವಿಧ ಸ್ವಾತಂತ್ರ÷್ಯ ಹೋರಾಟಗಾರರ ವಿವಿಧ ರೂಪಕಗಳು ಕಣ್ಮನ ಸೆಳೆದವು.

ವಾಕಥಾನ್‌ವು ಎನ್.ಸಿ.ಸಿ, ಎನ್.ಎಸ್.ಎಸ್, ಮಾಜಿ ಸೈನಿಕರ ಸಂಘ, ಸ್ಕೌಟ್ಸ್ ಮತ್ತು ಗೈಡ್ಸ್, ಪೋಲಿಸ್ ಇಲಾಖೆ, ಶಾಲಾ ಕಾಲೇಜು ಸಹಕಾರದೊಂದಿಗೆ ಯಶಸ್ವಿಯಾಗಿ ಜರುಗಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ.ಎಸ್. ಉಪವಿಭಾಗಾಧಿಕಾರಿ ಗಂಗಪ್ಪ. ಎಂ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು