ಗದಗ ಅಗಷ್ಟ16: ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರು ಅಗಷ್ಟ 14 ರಂದು ವಾ.ಕ.ರ.ಸಾ.ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಎಲ್ಲ ಇಲಾಖಾ ಮುಖ್ಯಸ್ಥರೊಂದಿಗೆ ಸಂಸ್ಥೆಯ ಸಾರಿಗೆ ಕಾರ್ಯಾಚರಣೆ ಮತ್ತು ಇನ್ನಿತರೆ ವಿಷಯಗಳ ಕುರಿತು ಕಿರು ಪರಿಚಯ ಸಭೆಯಲ್ಲಿ ಮಾತನಾಡಿದ ಅವರು ಸಂಸ್ಥೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ನೀಡುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ.ಎA, ವಿವೇಕಾನಂದ ವಿಶ್ವಜ್ಞ, ಪಿ.ವೈ.ನಾಯಕ, ಬಿ.ಬೋರಯ್ಯ, ವಿಜಯಶ್ರೀ ನರಗುಂದ, ಮಾಲತಿ.ಎಸ್.ಎಸ್, ಜಗದಂಬಾ ಕೋಪರ್ಡೆ, ಬಸವರಾಜ ಅಮ್ಮನ್ನವರ, ಗಣೇಶ ರಾಠೋಡ, ಇಸ್ಮಾಯಿಲ್ ಕಂದಗಲ್ ಹಾಗೂ ಶ್ರೀನಾಥ.ಜಿ, ಮತ್ತು ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.