Sunday, March 23, 2025
Google search engine
Homeಉದ್ಯೋಗಗದಗ : ವಿವಿಧ ಅರ್ಜಿಗಳ ಆಹ್ವಾನ

ಗದಗ : ವಿವಿಧ ಅರ್ಜಿಗಳ ಆಹ್ವಾನ

ಅರ್ಜಿ ಆಹ್ವಾನ

ಗದಗ ಅಗಸ್ಟ 19 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ( ನಿ) ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ , ಬೌದ್ಧರು, ಸಿಖ್ಕರು , ಪಾರ್ಸಿ, ಜನಾಂಗದವರಿಗೆ ಅರಿವು ನವೀಕರಣ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಮೆಡಿಕಲ್ ( ಎಂಬಿಬಿಎಸ್ , ಎಂಡಿಎAಎಸ್) ಡೆಂಟಲ್ ಮೆಡಿಕಲ್ (ಬಿಡಿ ಎಸ್, ಎಂ.ಡಿಎಸ್), ಆಯುಷ್ ( ಬಿ.ಆಯುಷ್ ,), ಇಂಜನೀಯರಿAಗ್ ಮತ್ತು ಟೆಕ್ನಾಲಜಿ ( ಬಿ.ಇ, ಬಿ.ಟೆಕ್ , ಎಂ.ಇ , ಎಂಟೆಕ್) ಬ್ಯಾಚಲರ್ ಆಫ್ ಆರ್ಕಿಟೆಕ್ಚರ್ , ಎಂ.ಬಿ.ಎ, ಎಂ.ಸಿ ಎ, ಎಲ್.ಎಲ್.ಬಿ, ಬಿ.ಎಸ್‌ಸಿ ಇನ್ ಹಾರ್ಟಿಕಲ್ಚರ್ , ಅಗ್ರಿಕಲ್ಚರ್ ಇಂಜನೀಯರಿAಗ್, ಡೈರಿ ಟೆಕ್ನಾಲಜಿ, ಫಾರೆಸ್ಟಿ , ವೆಟರ್ನರಿ ಮತ್ತು ಎನಿಮಲ್ ಟೆಕ್ನಾಲಜಿ, ಫಿಶರೀಸ್ , ಸೆರಿಕಲ್ಚರ್ , ಹೋಮ್ / ಕಮ್ಯುನಿಟಿ ಸೈನ್ಸ್ , ಫುಡ್ ನ್ಯೂಟ್ರಿಷನ್ ಮತ್ತು ಡಯಟೀಸ್, ಬಿ.ಫಾರ್ಮಾ, ಎಂ., ಫಾರ್ಮಾ, ಫಾರ್ಮಾಡಿ, ಫಾರ್ಮಾ ಎಂ. ಇಂತಹ ಕೋರ್ಸಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‌ಸೈಟ್ https://kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ ಅಲ್ಪಸಂಖ್ಯಾತರ ಭವನ 1 ನೇ ಮಹಡಿ, ಜಿಲ್ಲಾ ನ್ಯಾಯಾಲಯದ ಎದುರುಗಡೆ,ಹುಬ್ಬಳ್ಳೀ ರಸ್ತೆ, ಗದಗ ದೂ.ಸಂ. 08372-295147 ಇಲ್ಲಿ ಸಂಪರ್ಕಿಸಬಹುದಾಗಿದೆ.

ನರ್ಸಿಂಗ್ ಅಭ್ಯರ್ಥಿಗಳ ಗಮನಕ್ಕೆ

ಗದಗ ಅಗಸ್ಟ 19: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ ಟ್ಯಾಲೆಂಟ್ ಆರೇಂಜ್‌ಸAಸ್ಥೆಯು, ಭಾರತ ದೇಶದಿಂದÀ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ ಎಸ್ ಸಿ, ಜಿ ಎನ್ ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನುಕಲ್ಪಿಸಲು ಮುಂದೆ ಬಂದಿದ್ದು, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಹತೆ ಹೊಂದಿರುವ ನರ್ಸಿಂಗ್‌ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 08 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಲಿದ್ದು, ಸದರಿ ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಹಾಗೂ ಉಚಿತ ವಸತಿ ಸೌಲಭ್ಯ ನೀಡುವುದಲ್ಲದೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸುವುದಾಗಿ ತಿಳಿಸಿರುತ್ತದೆ. ತರಬೇತಿ ಪಡೆಯುವ ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಯನ್ನು ಹೊಂದಿರಬೇಕೆAದು ತಿಳಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ ಅಗಸ್ಟ 19 : ಗದಗ ಜಿಲ್ಲೆಯ ಗದಗ , ರೋಣ ಹಾಗೂ ಶಿರಹಟ್ಟಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ವೆಬ್‌ಸೈಟ್ ವಿಳಾಸ https://karnemakeone.kar.nic.in/abcdದ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮನರೇಗಾ ಯೋಜನೆಯಡಿ ಅರ್ಜಿ ಅಹ್ವಾನ

ಗದಗ ಅಗಸ್ಟ 19 : ಗದಗ ಜಿಲ್ಲಾ ಪಂಚಾಯತ್ ಮಹಾತ್ಮಾ ಗಾಂಧೀ ರಾಷ್ಟಿçÃಯ ಗ್ರಾಮಿಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ಮಂಜೂರಾಗಿರುವ ತಾಂತ್ರಿಕ ಸಹಾಯಕರು ಕೃಷಿ/ ತಾಂತ್ರಿಕ ಸಹಾಯಕರು ತೋಟಗಾರಿಕೆ/ ತಾಂತ್ರಿಕ ಸಹಾಯಕರು ಅರಣ್ಯ ಈ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳನ್ನು ನೇಮಿಸಿಕೊಳ್ಳುವ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು https://gadag.nic.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅಗಸ್ಟ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯ ದಿನಾಂಕ ಸೆಪ್ಟೆಂಬರ್ 5 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮನರೇಗಾ ವಿಭಾಗದ ವಿಷಯ ನಿರ್ವಾಹಕರಾದ ತೋಟಪ್ಪ ಕುದರಿ ಮೊ.ಸಂ. 7619652017 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ ಗದಗ : ಮಾರ್ಚ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಗದಗ : ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು..! ಮಾಜಿ ಪೈಲ್ವಾನರ್ ಮಾಸಾಶನ ಹೆಚ್ಚಳಕ್ಕೆ ಸ್ವಾಗತ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು