ಗದಗ : ಮಾತೆಯ ಹೆಸರಲ್ಲಿ ಒಂದು ಸಸಿ ನೆಟ್ಟು ಪ್ರಕೃತಿ ಉಳಿಸಲು ಕೈಜೋಡಿಸಿ:  ಜಿ.ಪಂ.ಸಿಇಓ ಭರತ್ .ಎಸ್

ಗದಗ  ಅಗಸ್ಟ 22 : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಗುರುವಾರ ತಮ್ಮ ಸರ್ಕಾರಿ ನಿವಾಸದ ಆವರಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದಿಂದ ಮಾತೆಯ ಹೆಸರಲ್ಲಿ ಒಂದು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಪ್ರತಿ ಪ್ರಜೆಯು ಮಾತೆಯ ಹೆಸರಲ್ಲಿ ಒಂದು ಸಸಿ ನೇಡುವ ಮೂಲಕ ಪ್ರಕೃತಿಯನ್ನು ಉಳಿಸುವಂತೆ ಕರೆ ನೀಡಿದರು.

 ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನ ಮಂತ್ರಿಯವರು ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿರುತ್ತಾರೆ, ಅದರಂತೆ ರಾಷ್ಟç ಮಟ್ಟದಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ ಸದರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಭರತ್ ಎಸ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಡಿ 2024-25 ನೇ ಸಾಲಿನ ಗುರಿಗನುಗುಣವಾಗಿ ಅನುಷ್ಠಾನಿಸಬೇಕಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು,
ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ , ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಹಾಸ ವರ್ಣೇಕರ್, ಜಿಲ್ಲಾ,ತಾಲ್ಲೂಕು & ಗ್ರಾಮ ಪಂಚಾಯತಿ, ಅರಣ್ಯ , ತೋಟಗಾರಿಕೆ ಇಲಾಖೆಯ ಅಧಿಕಾರಿ, ಗಣ್ಯರು , ಸಿಬ್ಬಂದಿಗಳು ಹಾಜರಿದ್ದರು,
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ , ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ, ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮ ಪಂಚಾಯತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ, ಗದಗ ತಾಲೂಕಿನ, ಲಕ್ಕುಂಡಿ ಗ್ರಾಮ ಪಂಚಾಯತಿಯ ಸರ್ಕಾರಿ ಹಿರಿಯ ಪ್ರೌಢಶಾಲೆ ಆವರಣದಲ್ಲಿ ಹಾಗೂ ಮುಂಡರಗಿ ತಾಲೂಕಿನ ಕದಾಂಪೂರ ಗ್ರಾಪಂ ವ್ಯಾಪ್ತಿಯ ಕಪ್ಪತ್ತಗಿರಿ ಗ್ರಾಮ & ಪೇಠಾಲೂರು ಗ್ರಾಮದಲ್ಲಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು,

Leave a Reply

Your email address will not be published. Required fields are marked *