ಗದಗ ಅಗಸ್ಟ 26: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನೆಗಳ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪಾರ್ಮ್ ಗೇಟ್, ಹಣ್ಣು ಮಾಗಿಸುವ ಘಟಕ, ಕೃಷಿಹೊಂಡ ಮತ್ತು ಕೀಟ ಬಲೆಗಳ ಅಳವಡಿಕೆ ಕಾರ್ಯಕ್ರಮಗಳಡಿ ಸಹಾಯಧನ ; ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ, ನೀರಿನಲ್ಲಿ ಕರಗುವ ರಸಗೊಬ್ಬರ, ಸೋಲಾರ್ ಮೋಟಾರ್ ಪಂಪ್‌ಸೆಟ್ ಅಳವಡಿಕೆ ಕಾರ್ಯಕ್ರಮಗಳಡಿ ಸಹಾಯಧನ ; ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿ ವಿವಿಧ ಬಗೆಯ ಕೃಷಿ ಉಕರಣಗಳ ಖರಿದಿಗೆ ಸಹಾಯಧನ ; ತಾಳೆ ಬೆಳೆ ಯೋಜನೆಯಡಿ ತಾಳೆ ಬೆಳೆ ಹೊಸಪ್ರದೇಶ ವಿಸ್ತರಣೆಗೆ ಸಹಾಯಧನ ; ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಘಟಕ ಅಳವಡಿಕೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿರುತ್ತದೆ.
ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಆಸಕ್ತ ರೈತರು ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಶಿರಹಟ್ಟಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.