Monday, September 16, 2024
Google search engine
Homeಉದ್ಯೋಗಗದಗ : ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆ

ಗದಗ : ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆ

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅನುಸರಿಸಬೇಕಾದ ವಸ್ತç ಸಂಹಿತೆ

ಗದಗ  ಅಗಸ್ಟ 26: ಜಿಲ್ಲೆಯಲ್ಲಿ ಅಗಸ್ಟ 27ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಜರುಗಲಿದ್ದು ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ನಡೆಸಲು ಕ್ರಮ ಜರುಗಿಸಬೇಕೆಂದು ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಕೆಳಗಿನಂತೆ ಕಟ್ಟುನಿಟ್ಟಾಗಿ ವಸ್ತç ಸಂಹಿತೆಯ ಅನುಸರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಶೂ,ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂ ಟೂಥ , ಕ್ಯಾಲ್ಕುಲೇಟರ್ , ವೈಟ್‌ಫ್ಲುಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ , ಬುಕ್ಸ್ ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮೆಟಲ್ ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ.

ಧಾರ್ಮಿಕ ಆಚರಣೆಗೆ ಸಂಬAಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ಮತ್ತು ಹೀಯರಿಂಗ್ ಏಡ್ ಉಪಕರಗಳನ್ನು ಧರಿಸಿರುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾಗುವುದು. ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ