ಗದಗ : ಹಿರಿಯ ನಾಗರಿಕರ ದಿನಾಚರಣೆ : ಪೂರ್ವಭಾವಿ ಸಭೆ

ಗದಗ ಅಗಷ್ಟ 27: ಜಿಲ್ಲೆಯಲ್ಲಿ ಅಕ್ಟೋಬರ್ 1 ರಂದು ಹಿರಿಯ ನಾಗರಿಕರ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವಾಯ್,ಶೆಟ್ಟಪ್ಪನವರ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಆಚರಿಸಬೇಕು. ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ ಮಾತನಾಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಸೆಪ್ಟೆಂಬರ್ 4 ರಂದು ನಗರದ ಕೆ.ಎಚ್.ಪಾಟೀಲ ಜಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಸಾಂಸ್ಕöÈತಿಕ ಸ್ಪರ್ಧೆಗಳ ಏರ್ಪಡಿಸಲಾಗುವುದು. ಸ್ಪರ್ಧೆಗಳಲ್ಲಿ ಹಿರಿಯ ನಾಗರಿಕರು ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಆಯೋಜಿಸುವ ಕುರಿತು ಹಾಗೂ ವಿವಿಧ ಸೌಲಭ್ಯಗಳ ಮಾಹಿತಿ ಒದಗಿಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಹಿರಿಯ ನಾಗರಿಕರು,ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸೆಪ್ಟೆಂಬರ್ 4 ರಂದು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ದೆಗಳ ವಿವರ ಕೆಳಗಿನಂತಿದೆ. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿರಿಯ ನಾಗರಿಕರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಕ್ರೀಡೆಗಳು : ಬಿರುಸಿನ ನಡಿಗೆ , ಬಕೆಟ್ ನಲ್ಲಿ ಬಾಲನ್ನು ಎಸೆಯುವುದು, ಮ್ಯುಜಿಕಲ್ ಚೇರ್ ,

ಸಾಂಸ್ಕೃತಿಕ ಸ್ಪರ್ಧೆ: ಏಕಪಾತ್ರಾಭಿನಯ, ಗಾಯನ ಸ್ಪರ್ಧೆ

Leave a Reply

Your email address will not be published. Required fields are marked *