ಗದಗ ಅಗಸ್ಟ 28 : ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಜಿ.ಪಂ. ಸಿಇಓ ಭರತ್ ಎಸ್ ಅವರು ಮಂಗಳವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳವಾರ ಪಟ್ಟಣದ ಅಗಸ್ತö್ಯ ತೀರ್ಥ ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿ ಅಡುಗೆ ಕೋಣೆ, ಶೌಚಾಲಯ ಸೇರಿದಂತೆ ಪ್ರತಿಯೊಂದು ಕೊಠಡಿಗೂ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಾಗುವ ಸೌಲಭ್ಯಗಳನ್ನು ನಿಯಮಾನುಸಾರ ವಿತರಣೆ ಮಾಡಬೇಕು ಎಂದು ಹಾಸ್ಟೆಲ್ ಸಿಬ್ಬಂದಿಗಳಿಗೆ ಸೂಚಿಸಿದರು.
ವಿದ್ಯಾರ್ಥಿನಿಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಉತ್ತಮವಾದ ಶುಚಿರುಚಿಯಾದ ಆಹಾರ ಒದಗಿಸಬೇಕು ಎಂದು ಸೂಚಿಸಿದರು. ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.
ಆರೋಗ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ರೋಗಿಗಳಿಗೆ ಒದಗಿಸಬೇಕು.
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ವಿಳಂಬ ಮಾಡದೇ ಚಿಕಿತ್ಸೆ ನೀಡುವಂತೆ ಸೂಚಿಸಿ, ಆಸ್ಪತ್ರೆಯ ಶೌಚಾಲಯ, ಔಷಧ ವಿತರಣಾ ಕೇಂದ್ರ, ದಾಸ್ತಾನು ಕೊಠಡಿ, ಡಯಾಲಿಸಿಸ್ ವಾರ್ಡ, ಹೊರ ರೋಗಿಗಳ ಚಿಕಿತ್ಸಾ ಕೊಠಡಿಗಳನ್ನು ವೀಕ್ಷಿಸಿದರು. ಆಸ್ಪತ್ರೆಯ ಒಳ ಹಾಗೂ ಹೊರ ಆವರಣದಲ್ಲಿ ವಾತಾವರಣ ಪರಿಶೀಲಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದರು.
ಲಕ್ಷ್ಮೇಶ್ವರ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ಡಾ. ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಆಸ್ಪತ್ರೆಯ ಡಾ.ಗುರುರಾಜ ಕುಡಗಿ, ಡಾ.ಪ್ರವೀಣ ಸಜ್ಜನರ ಹಾಗೂ ಹಾಸ್ಟೆಲ್ ಸಿಬ್ಬಂದಿ ಇದ್ದರು.