Monday, February 17, 2025
Google search engine
Homeಗದಗಗದಗ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ

ಗದಗ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ

ಹಾಗೂ ವಿಶೇಷ ಛಾಯಾಚಿತ್ರ ಕಾರ್ಯಕ್ರಮ

ಗದಗ  29: ಕೇಂದ್ರ ಸಂವಹನ ಇಲಾಖೆ, ಧಾರವಾಡ. ವಾರ್ತಾ ಮತ್ತು ಪ್ರಸಾರ ಸಚಿವಾಲಯ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಎರಡನೇ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೃತ್ಯುಂಜಯ ಗುಡ್ಡದಾನ್ವೇರಿ ತಮ್ಮ ಇಲಾಖೆಯಲ್ಲಿನ ರಾಷ್ಟಿçÃಯ ಪೋಷಣ ಅಭಿಯಾನ ಯೋಜನೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಇರುವ ಸೌಲಭ್ಯಗಳು, ಮಕ್ಕಳ ಬೆಳವಣಿಗೆಗೆ ಪೂರಕವಾದ ಪೌಷ್ಟಿಕಾಂಶ ಆಹಾರಗಳ ಕುರಿತು ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಮಾತನಾಡಿ, ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ಅದರಲ್ಲಿರುವ ಸೌಲಭ್ಯಗಳ ಕುರಿತು ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಜನರಲ್ ಸ್ಪೆಷಲಿಸ್ಟ್ ಮಧುಶ್ರೀ ಉಪ್ಪಾರ ಮಾತನಾಡಿ, ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಸೌಲಭ್ಯಗಳ ಕುರಿತು ಹಾಗೂ ಇತರ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆಯ ಸಂಯೋಜಕರಾದ ಮುರಳಿಧರ ಕಾರಭಾರಿ ಪ್ರಸ್ತಾವಿಕವಾಗಿ ಮಾತನಾಡಿ, ರಾಷ್ಟಿçÃಯ ಕ್ರೀಡಾ ದಿನದ ಪ್ರತಿಜ್ಞಾವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಪ್ರೌಢಶಾಲೆಯ ಮುಖ್ಯ ಗುರುಗಳಾದ ಎಸ್. ಎಚ್.ಪೂಜಾರ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಮುಂತಾದವರು ಭಾಗವಹಿಸಿದ್ದರು. ಜೈ ಭೀಮ ಕಲಾ ತಂಡದ ಮುಖ್ಯಸ್ಥ ಬಸವರಾಜ ಮತ್ತು ತಂಡದವರು ವಿವಿಧ ಜಾನಪದ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.